ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರು ಜಾಗೃತಿವಹಿಸಿ : ಅಶ್ವಿನಿ ಚಂದ್ರಕಾಂತ್
Everyone should be aware of cleanliness: Ashwini Chandrakanth
ಶಿಗ್ಗಾವಿ 01 : ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರು ಜಾಗೃತಿವಹಿಸಬೇಕು. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಂಡಲ್ಲಿ ಯಾವುದೇ ಕಾಯಿಲೆಗಳು ಬರುವುದಿಲ್ಲ. ಶಾಲಾ ಹಂತದಿಂದಲೇ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಎಂದು ನ್ಯಾಯಾಧೀಶೆ ಅಶ್ವಿನಿ ಚಂದ್ರಕಾಂತ್ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಚ್ಛತಾ ಕಾರ್ಯಕ್ರಮ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದ್ದು, ನಮ್ಮ ಮನೆ, ಕಚೇರಿ ಹಾಗೂ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡರೇ ನಮ್ಮ ದೇಶ ಸ್ವಚ್ಛವಾಗಿರುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರು,ಕಾರ್ಯದರ್ಶಿ, ವಕೀಲರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 