ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಬೇಕು
Everyone should be aware of the law
ಲೋಕದರ್ಶನ ವರದಿ
ಹಾವೇರಿ 06 : ಕಾನೂನುಗಳ ಮಾಹಿತಿ ಕೊರತೆಯಿಂದ ಅನೇಕ ಅಹಿತಕರ ಘಟನೆಗಳು ನಡೆಯುತ್ತಿದ್ದು, ಹಾಗಾಗಿ ಪ್ರತಿಯೊಬ್ಬರೂ ಕಾನೂನುಗಳ ಬಗ್ಗೆ ಅರಿವು ಹೊಂದಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಹೆಚ್. ವಿ. ಅವರು ಹೇಳಿದರು.
ಹಾವೇರಿ ನಗರದ ರಾಮದೇವರ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಾವೇರಿ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶೇಷಚೇತನರಿಗೆ ಕಾನೂನು ಅರಿವು ಮತ್ತು ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ನೆರವು ಕೋರಿ ಬರುವವರಿಗೆ ಸಕಾಲದಲ್ಲಿ ಸಹಾಯ ನೀಡುವುದೇ ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶ ಎಂದು ಹೇಳಿದರು.
ದೇಶದ ಎಲ್ಲಾ ವರ್ಗದ ಜನರಿಗೂ ಸಮಾನ ನ್ಯಾಯ ಒದಗಿಸುವುದು ಕಾನೂನಿನ ಆಶಯವಾಗಿದೆ ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಮತ್ತು ವಿಶೇಷಚೇತನರಿಗೆ ಉಚಿತ ಕಾನೂನು ಸೇವೆ ನೀಡಲು ಪ್ರಾಧಿಕಾರ ಬದ್ಧವಾಗಿದೆ. ಯಾವುದೇ ಕಾನೂನು ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1500ಕ್ಕೆ ಕರೆ ಮಾಡಿ ನೆರವು ಪಡೆಯಬಹುದು.
ಪೋಕ್ಸೋ ಮತ್ತು ಬಾಲ್ಯವಿವಾಹ ಪ್ರಕರಣಗಳಲ್ಲಿ ಹಾವೇರಿ ಜಿಲ್ಲೆಯು ರಾಜ್ಯದಲ್ಲಿ 5ನೇ ಸ್ಥಾನದಲ್ಲಿರುವುದು ಆತಂಕಕಾರಿ ವಿಷಯವಾಗಿದ್ದು, ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು. ವರದಕ್ಷಿಣೆ ಕಿರುಕುಳ ಅಥವಾ ಬಾಲ್ಯವಿವಾಹದಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಹಾವೇರಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಎಚ್.ಸಿ.ಸಿದ್ಧನಗೌಡ ಮಾತನಾಡಿ, ಇಂದಿನ ಕಾಲದಲ್ಲಿ ವಿಕಲಚೇತನರು ಸಮಾಜದಲ್ಲಿ ಮಹತ್ವದ ಸ್ಥಾನವನ್ನು ಹೊಂದಿದ್ದಾರೆ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಕಾನೂನು ಸಮಸ್ಯೆಗಳಿದ್ದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ನೆರವನ್ನು ಪಡೆಯಬೇಕು ಎಂದು ಸಲಹೆ ನೀಡಿದರು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್. ದಿಳ್ಳೆಪ್ಪನವರ ಅವರು ಬಾಲ್ಯ ವಿವಾಹ ನಿಷೇಧ , ವರದಕ್ಷಿಣೆ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ನಗರಸಭೆ ಪೌರಾಯುಕ್ತ ಎಚ್. ಕಾಂತರಾಜು ಮಾತನಾಡಿ, ವಿಕಲಚೇತನರಿಗಾಗಿ ಮೀಸಲಾತಿ ನಿಧಿಯಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಲ್ಯಾಪ್‌ಟಾಪ್ ವಿತರಣೆ ಹಾಗೂ ನಗರಸಭೆಗೆ ಬರುವ ವಿಕಲಚೇತನರಿಗೆ ಅನುಕೂಲವಾಗುವಂತೆ ರೂ.62 ಲಕ್ಷ ವೆಚ್ಚದಲ್ಲಿ ಲಿಫ್ಟ್ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿಶೇಷಚೇತನರಿಗೆ ವೀಲ್ ಚೇರಗಳನ್ನು ವಿತರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 