ಬಾಲ್ಯ ವಿವಾಹ ತಡೆಗೆ ಪ್ರತಿಯೊಬ್ಬರೂ ಪಣ ತೊಡಬೇಕು-ನ್ಯಾಯಾಧೀಶ ಬಿ.ಆರ್. ಮುತಾಲಿಕ ದೇಸಾಯಿ
Everyone should do their bit to prevent child marriage-Judge B.R. Mutalika Desai
ಹಾವೇರಿ 30: ಬಾಲ್ಯ ವಿವಾಹ ಎನ್ನುವುದು ಸಾಮಾಜಿಕ ಪಿಡುಗಾಗಿದೆ, ಈ ಅನಿಷ್ಠ ಪದ್ಧತಿ ತೊಡೆದುಹಾಕಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ ಅವರು ಹೇಳಿದರು.
ನಗರದ ಉರ್ದು ಪ್ರೌಢಶಾಲೆಯಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬಾಲ ವಿವಾಹ ಮುಕ್ತ ಭಾರತ ಅಭಿಯಾನ ಅಂಗವಾಗಿ ಕಾನೂನು ಅರೊವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ತಡೆಗೆ ಗೌರವಾನ್ವಿತ ಸುಪ್ರೀಂ ಕೋರ್ಟ್ ಹಾಗೂ ಉಚ್ಚ ನ್ಯಾಯಾಲಯಗಳು ಹಲವಾರು ನಿರ್ದೇಶನಗಳನ್ನು ನೀಡಿವೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಬಾಲ್ಯ ವಿವಾಹ ತಡೆಗೆ ಕೈಜೋಡಿಸಬೇಕು. ತಮ್ಮ ಸುತ್ತಮುತ್ತ ಇಂತಹ ಪ್ರಕರಣಗಳು ಕಂಡುಬಂದಲ್ಲಿ 1098 ಟೋಲ್ ಪ್ರೀ ಸಂಖ್ಯೆ ಕರೆ ಮಾಡಿ ಮಾಹಿತಿ ನೀಡಬೇಕು. ಕಾನೂನಿನ ನೆರವಿನ ಅವಶ್ಯಕತೆ ಇದ್ದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಿ ಕಾನೂನು ನೆರವು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಪ್ಯಾನಲ್ ವಕೀಲರಾದ ಕೆ.ಜಿ.ಕಿತ್ತೂರ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ, ಶಾಲಾ ಮುಖ್ಯೋಪಾಧ್ಯಾಯ ಡಾ.ಬಿ.ಎಂ.ಬೇವಿನಮರದ ಇತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 