ಲೋಕದರ್ಶನ ವರದಿ
ಮಕ್ಕಳ ಉತ್ತಮ ಆರೋಗ್ಯಕ್ಕೆ ಎಲ್ಲರೂ ಕೈಜೋಡಿಸಬೇಕು
ಹಾವೇರಿ 22: ಮಕ್ಕಳ ಉತ್ತಮ ಆರೋಗ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಮಕ್ಕಳ ಆರೋಗ್ಯದ ಜಾಗೃತಿಗೆ ರಾಷ್ಟ್ರೀಯ ಪೋಷಣ ಪಕ್ವಾಡ ಅಭಿಯಾನ ಸಹಕಾರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಅವರು ಹೇಳಿದರು.
ದೇವಿಹೊಸೂರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸೋಮವಾರ ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ರಾಷ್ಟ್ರೀಯ ಪೋಷಣ ಪಕ್ವಾಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಕ್ಕಳ ಆರೋಗ್ಯಕರ ಜೀವನಕ್ಕೆ ಅನುಸರಿಸಬೇಕಾದ ಕ್ರಮಗಳು ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿಶಾಲಕ್ಷಮ್ಮ ಮುದಿಗೌಡ್ರ ಮಾತನಾಡಿ, ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶಿಲ್ಪಾ ಸಿದ್ದಮ್ಮನವರ ಅವರು ಅಪೌಷ್ಟಿಕತೆ ನಿರ್ವಹಣೆಗೆ ಸೂಕ್ತ ಕ್ರಮಗಳ ಬಗ್ಗೆ, ಮಕ್ಕಳಲ್ಲಿ ಬೊಜ್ಜು ನಿವಾರಣೆಗೆ ಹಾಗೂ ಆರೋಗ್ಯಕರ ಜೀವನ ಶೈಲಿ ಚಟುವಟಿಕೆಗಳ ಕುರಿತು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧು ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಶೈಲಾ ಕುರಹಟ್ಟಿ ಅವರು ಮಾತನಾಡಿ, ತಾಯಂದಿರ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಲು 2018 ಮಾರ್ಚ್ 8 ರಂದು ಪೋಷಣ ಅಭಿಯಾನ ಆರಂಭಿಸಲಾಗಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿ ಅಪೌಷ್ಠಿಕತೆ ಹೊಗಲಾಡಿಸುವುದು ರಾಷ್ಟ್ರೀಯ ಪೋಷಣ ಪಕ್ವಾಡ ಮುಖ್ಯ ಉದ್ದೇಶವಾಗಿದೆ. ಅಂಗನವಾಡಿಗಳಲ್ಲಿ ನೀಡುವ ಪೂರಕ ಪೌಷ್ಠಿಕ ಆಹಾರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಅವರು, ಗರ್ಭಾವಸ್ಥೆಯಲ್ಲಿ ಆರೋಗ್ಯ ತಪಾಸಣೆ ಮಹತ್ವದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಮಹಮ್ಮದಜಾಫರ ಯರೇಸಿಮಿ, ಸದಸ್ಯರಾದ ಮಂಜುನಾಥ ಕರಬಣ್ಣನವರ, ಲಿಂಗನಗೌಡ್ರ ಮುದಿಗೌಡ್ರ, ಈರ್ಪ ಗುತ್ತಲ, ಮಂಜುಳಾ ಗುಂಡೂರು, ಮೇಲ್ವಿಚಾರಕಿ ಶ್ರೀಮತಿ ಹೊನ್ನಮ್ಮ ಬಸವನಾಯ್ಕರ, ಅನ್ನಪೂರ್ಣ ಕಟ್ಟೆಪ್ಪನವರ, ಶ್ರೀಮತಿ ರೇಣುಕಾ ತಳವಾರ, ಶಾಂತ ಶಾಂತಗೇರಿ, ಪಿಡಿಒ ಶಿವಬಸಪ್ಪ ಸಾತೇನಹಳ್ಳಿ, ಮಾಲತೇಶ ಗಾಜಿ ಹಾಗೂ ವಿರಂಜೀವಿ ಎಂ.ಎ. ಇತರರು ಉಪಸ್ಥಿತರಿದ್ದರು.