ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ
Everyone should plant saplings and try to save the environment: Ramesh Alagundi
ಲೋಕದರ್ಶನ ವರದಿ
ಬೆಟಗೇರಿ 05 : ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂನ್.5 ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮಗೆ ಹಸಿರೇ ಉಸಿರಾಗಿದೆ. ನಮ್ಮ ಸುತ್ತಲಿನ ಪರಿಸರ ಹಸಿರಿನಿಂದ ಕಂಗೊಳಿಸಬೇಕಾದರೆ ಪ್ರತಿಯೊಬ್ಬರೂ ಒಂದು ಸಸಿ ನೆಟ್ಟು ಪೋಷಿಸಿ, ಬೆಳಸಬೇಕು ಎಂದರು.
ಶಿಕ್ಷಕ ಸದಾನಂದ ತೆರಣೆ ಮತ್ತು ವೈ.ಎಂ.ವಗ್ಗರ ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಕುರಿತು ಮಾತನಾಡಿದರು. ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಮಾಡುವ ಕಾರ್ಯಕ್ರಮ ನಡೆಯಿತು.
ಈರಣ್ಣ ಪಟಗುಂದಿ, ಪ್ರಕಾಶ ಕುರಬೇಟ, ರಾಕೇಶ ನಡೋಣೆ, ಭಾಗ್ಯಶ್ರೀ ನಾಯಕ, ಗಣಪತಿ ಭಾಗೋಜಿ, ಸಿರಾಜಅಹ್ಮದ ಜಿಡ್ಡಿಮನಿ, ಶಾಲೆಯ ಸಹ ಶಿಕ್ಷಕರು, ಅತಿಥಿ ಶಿಕ್ಷಕರು, ಪಾಲಕರು, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು, ಮತ್ತೀತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 