ಪ್ರತಿಯೊಬ್ಬರೂ ಕಣ್ಣಿನ ಆರೋಗ್ಯದ ವಿಶೇಷ ಕಾಳಜಿ ವಹಿಸಿ: ಡಾ.ಪ್ರಭುಸಾರಂಗದೇವಶ್ರೀ
Everyone should take special care of eye health: Dr. Prabhusarangadevasree
ಲೋಕದರ್ಶನ ವರದಿ
ಸಿಂದಗಿ 26: ಇಂದಿನ ಒತ್ತಡದ ಜೀವನ ಶೈಲಿ, ಮೊಬೈಲ್ ಹಾಗೂ ಡಿಜಿಟಲ್ ಉಪಕರಣಗಳ ಅತಿಯಾದ ಬಳಕೆಯಿಂದ ಕಣ್ಣಿನ ಸಮಸ್ಯೆಗಳು ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಕಣ್ಣಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಸಾರಂಗ ಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ನಗರದ ಸಾರಂಗಮಠದಲ್ಲಿ ಚನ್ನವೀರ ಸ್ವಾಮೀಜಿಯವರ 35ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಾರಂಗಮಠ ಸಿಂದಗಿ, ಲಿಂ. ಎನ್.ಚನ್ನಯ್ಯಸ್ವಾಮಿ ಮತ್ತು ಲಿಂ.ಶಾರದಾದೇವಿ ಜನಕಲ್ಯಾಣ ಫೌಂಡೇಶನ್ ಹಾಗೂ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನರು ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದರಿಂದ ಅನೇಕ ಕಣ್ಣಿನ ಸಮಸ್ಯೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಸೇವೆಯ ಮೂಲಕ ಸಮಾಜ ಸೇವೆ ಮಾಡುವ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಚನ್ನವೀರ ಸ್ವಾಮೀಜಿಯವರ ಸೇವಾ ತತ್ವಗಳನ್ನು ಸ್ಮರಿಸಿ, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಎಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಡಾ. ವೀನೀತಾ ಹಾಗೂ ಡಾ. ಜವೀನ ಅವರ ನೇತೃತ್ವದ ವೈದ್ಯಕೀಯ ತಂಡ ಶಿಬಿರದಲ್ಲಿ ಭಾಗವಹಿಸಿ ಕಣ್ಣಿನ ತಪಾಸಣೆ ನಡೆಸಿತು. ಶಿಬಿರದಲ್ಲಿ 124ಕ್ಕೂ ಹೆಚ್ಚು ಜನರು ಉಚಿತ ನೇತ್ರ ತಪಾಸಣೆ ಮಾಡಿಸಿಕೊಂಡಿದ್ದು, 74 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಹಿರಿಯ ನಾಗರಿಕರು ಮತ್ತು ಮಹಿಳೆಯರು ಶಿಬಿರದ ಸದುಪಯೋಗ ಪಡೆದುಕೊಂಡರು.
ಶ್ರೀಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಅನುಗ್ರಹ ಆಸ್ಪತ್ರೆಯ ಆಡಳಿತಾಧಿಕಾರಿ ದತ್ತು ಹೊಸಮಠ, ಅಶೋಕ ವಾರದ, ಡಾ.ಮಹಾಂತೇಶ ಹಿರೇಮಠ, ಸೋಮಶೇಖರ ಜೋಗೂರ, ಡಾ.ನಾಗರಾಜ ಮುರಗೋಡ, ಕುಮಾರಸ್ವಾಮಿ ಜಹಾಗೀರದಾರ, ವ್ಹಿ.ಆರ್.ಪಾಟೀಲ, ಶ್ರೀದೇವಿ ಸಿಂದಗಿ, ಭೀಮಾಶಂಕರ ಅರಳಗುಂಡಗಿ, ಬಸಯ್ಯ ಮಠ ಸೇರಿದಂತೆ ಮಠದ ಭಕ್ತರು, ಸಂಸ್ಥೆಯ ಆಡಳಿತ ಮಂಡಳಿ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯ ಪ್ರಾಚಾರ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಜಿ.ಪಿ. ಪೋರವಾಲ ಕಾಲೇಜಿನ ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ವೈ.ಆರ್.ಸಿ ವಿದ್ಯಾರ್ಥಿಗಳು ಇನ್ನಿತರರು ಇದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 