ರಕ್ತದಾನದಿಂದ ದೇಹ ಮತ್ತು ಮನಸ್ಸು ಆರೋಗ್ಯಯುತ ಮಾಜಿ ಸೈನಿಕ ಚಿಕ್ಕಣ್ಣನವರ್
Ex-soldier Chikkannavar gets healthy body and mind after donating blood
ಬ್ಯಾಡಗಿ 08 : ರಕ್ತದಾನದಿಂದ ರಕ್ತದೊತ್ತಡ ಮಧುಮೇಹದಂತ ರೋಗಗಳು ನಿಯಂತ್ರಣಕ್ಕೆ ಬರುವುದರ ಜೊತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಮಾಜಿ ಸೈನಿಕ ಹಾಗೂ ಭ್ರಷ್ಟಾಚಾರ ವಿರೋಧಿ ಜನ ಆಂದೋಲನ ನ್ಯಾಸ ಸಮಿತಿ ಅಧ್ಯಕ್ಷರು ಮಲ್ಲೇಶಪ್ಪ ಚಿಕ್ಕಣ್ಣನವರ್ ಅಭಿಪ್ರಾಯ ಪಟ್ಟರು. ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ವಿರೋಧಿ ಜನ ಆಂದೋಲನ ನ್ಯಾಸ ಬ್ಯಾಡಗಿ ಹಾಗೂ ಸಾರ್ವಜನಿಕ ಆಸ್ಪತ್ರೆ ಮತ್ತು ರಕ್ತಶೇಕರಣ ಘಟಕ ಹಾಗೂ ಹಾವೇರಿ ಜಿಲ್ಲಾ ರಕ್ತಕೇಂದ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಜಿಲ್ಲಾ ಆಸ್ಪತ್ರೆ ಹಾವೇರಿ ಇವರ ಸಹಯೋಗದೊಂದಿಗೆ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದವರು. ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯೂನಿಟ್ ರಕ್ತದ ಕೊರತೆ ಎದುರಾಗುತ್ತಿದೆ.
ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಅಪಘಾತದ ಮೃತಪಡುತ್ತಿದ್ದಾರೆ ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕೆಂದು ಕರೆ ನೀಡಿದರು. ಇದೇ ವೇಳೆ ರಕ್ತದಾನ ಶಿಬಿರದಲ್ಲಿ ಸಮಾಜ ಸೇವಕ ಎಂಎನ್ ನಾಯಕ್ ರಕ್ತದಾನ ಮಾಡಿ ಮಾತನಾಡಿ ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಹೋಗಲಾಡಿಸಬೇಕು ಹೆಚ್ಚು ಜನರು ಸೇರುವ ಧಾರ್ಮಿಕ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನಕ್ಕೆ ಶಿಬಿರ ಆಯೋಜಿಸಿದರೆ ದೇಶದಲ್ಲಿನ ರಕ್ತದ ಕೊರತೆ ನೀಗಿಸಬಹುದು ಧಾರ್ಮಿಕ ಕೇಂದ್ರಗಳು ಪ್ರಾರ್ಥನೆಗಳಿಗೆ ಸೀಮಿತವಾಗಿರದೆ ಸಮಾಜಮುಖಿಯಾಗಿ ಸ್ಪಂದಿಸಬೇಕು ಎಂದರು.ಒಟ್ಟು ಶಿಬಿರದಲ್ಲಿ 17 ದಾನಿಗಳು ಮತ್ತು ಒಬ್ಬ ಮಹಿಳಾ ದಾನಿ ರಕ್ತದಾನ ಮಾಡಿದರುಕಾರ್ಯಕ್ರಮದಲ್ಲಿ ರಕ್ತಶೇಕರಣ ಘಟಕದ ಅಧಿಕಾರಿ ಶಶಿಕುಮಾರ್ ಶಿವಮೊಗ್ಗಿ. ಡಾ. ಬಸವರಾಜ ತಳವಾರ್. ಡಾ.ರಾಮಪ್ಪ ಕಟ್ಟಿ. ಡಾ. ಮಹಾಂತ್. ಸ್ಮಿತಾ ಬಿ. ರೇವಣಸಿದ್ದಪ್ಪ ತೆಂಬದ. ಶ್ರೀಕಾಂತ್ ಹುಣಸಿಮರ ಫಕೀರ್ಪ ಹೊನ್ನಮ್ಮನವರ್ ತಾಲೂಕ್ ಆಸ್ಪತ್ರೆ ಎಲ್ಲಾ ಆರೋಗ್ಯ ಸಿಬ್ಬಂದಿಗಳು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 