ಉಚಿತ ಮಧುಮೇಹ ತಪಾಸಣಾ ಶಿಬಿರಕ್ಕೆ ಉತ್ತಮ ಸ್ಪಂದನೆ
Excellent response to free diabetes screening camp
ಲೋಕದರ್ಶನ ವರದಿ
ವಿಜಯಪುರ 17: ಆರೋಗ್ಯವೇ ನಮ್ಮ ಅತ್ಯಮೂಲ್ಯ ಸಂಪತ್ತು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಎಲ್.ಡಿ.ಆರಿ್ಬ. ಸಿಪಿಐ ಕಲ್ಲಣಗೌಡ ಪಾಟೀಲ ಹೇಳಿದರು. ನಗರದ ಶಿಕಾರಖಾನೆ ಸ್ಟೇಷನ್ ಬ್ಯಾಕ್ರೋಡ್ನ ಚೌಧರಿ ಆಸ್ಪತ್ರೆ ಸಮೀಪದ ಧನ್ವಂತರಿ ಕ್ಲಿನಿಕ್ನಲ್ಲಿ ಆಯೋಜಿಸಿದ್ದ ಉಚಿತ ಮಧುಮೇಹ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
"ದೈನಂದಿನ ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ನಿರ್ಲಕ್ಷಿಸುವುದು ಸಾಮಾನ್ಯವಾಗಿದೆ. ಆದರೆ ಮಧುಮೇಹ ಸೇರಿದಂತೆ ಹಲವು ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಧನ್ವಂತರಿ ಕ್ಲಿನಿಕ್ ಆಯೋಜಿಸಿರುವ ಉಚಿತ ತಪಾಸಣಾ ಶಿಬಿರ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉತ್ತಮ ಪ್ರಯತ್ನವಾಗಿದೆ" ಎಂದು ಹೇಳಿದರು.
ಶಿಬಿರದಲ್ಲಿ ಮಧುಮೇಹ ತಪಾಸಣೆ, ವೈದ್ಯರ ಸಲಹೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಸಂದರ್ಭದಲ್ಲಿ ಧನ್ವಂತರಿ ಕ್ಲಿನಿಕ್ನ ವೈದ್ಯಾಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಗಂಗನಹಳ್ಳಿ, ಸಂಗಮೇಶ್ ಜಾಧವ, ಸಿ.ಎಂ. ಗಂಗನಹಳ್ಳಿ, ಗೆಟ್ ವೆಲ್ ಲ್ಯಾಬೊರೇಟರಿಯ ಮುಖ್ಯಸ್ಥ ಕಾಂತು ಭೋಸಲೆ, ಶಿಕಾರಖಾನೆ ಪ್ರಮುಖ ಹನುಮಂತ ಚಲವಾದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 