ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಉತ್ತಮ ಸ್ಪಂದನೆ
Excellent response to the free health check-up camp
ರಾಣೆಬೆನ್ನೂರು 02 : ಲಯನ್ಸ್ ಸೇವಾ ಸಂಸ್ಥೆ ಆರಂಭದಿಂದಲೂ ಬಡವರು, ದೀನದಲಿತರು ಹಾಗೂ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಲ್ಲೇಶಪ್ಪ ಅರಕೇರಿ ಹೇಳಿದರು. ನಗರದ ಲಯನ್ಸ್ ಶಾಲೆಯ ಸಭಾಭವನದಲ್ಲಿ ಲಯನ್ಸ್ ಸೇವಾ ಸಂಸ್ಥೆ ಹಾಗೂ ದಾವಣಗೆರೆ ಎಸ್.ಎಸ್. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಂಯುಕ್ತವಾಗಿ ಆಯೋಜಿಸಿದ್ದ ಉಚಿತ ಸಾರ್ವಜನಿಕ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲಯನ್ಸ್ ಸಂಸ್ಥೆ ಸಮಾಜಮುಖಿ ಸೇವೆಯನ್ನೇ ಧ್ಯೇಯವಾಗಿಸಿಕೊಂಡು ಜನಸೇವೆಯೇ ಜನಾರ್ದನ ಸೇವೆ ಎಂಬ ತತ್ವದೊಂದಿಗೆ ಕಾರ್ಯನಿರ್ವಹಿಸುತ್ತಿದೆ.
ಸಂಸ್ಥೆ ತನ್ನ 50ನೇ ವರ್ಷದ ಸಂಭ್ರಮದಲ್ಲಿದ್ದು, ಆರಂಭದಿಂದಲೂ ಜನಪರ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು. ದಾವಣಗೆರೆ ಎಸ್.ಎಸ್. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ಡಾ. ರಾಕೇಶ್ ತಿಲಕ್ ಮಾತನಾಡಿ, ಇಂದಿನ ಜೀವನಶೈಲಿಯಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಯಾವುದೇ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಅವುಗಳನ್ನು ನಿರ್ಲಕ್ಷಿಸದೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಸಲಹೆ ನೀಡಿದರು. ಶಿಬಿರದಲ್ಲಿ ಡಾ. ವೀರಣ್ಣ ಹಾಗೂ ವೈದ್ಯಕೀಯ ಸಿಬ್ಬಂದಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ವೈದ್ಯಕೀಯ ಸಲಹೆ ನೀಡಿದರು.
ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಶಿಬಿರದಲ್ಲಿ 200ಕ್ಕೂ ಹೆಚ್ಚು ಪುರುಷರು ಹಾಗೂ ಮಹಿಳೆಯರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಎಲ್. ಕೊಟ್ರೇಶಪ್ಪ ಎಮ್ಮಿ, ಎಲ್.ಎನ್.ಎಸ್. ಕುಲಕರ್ಣಿ, ವೀರಣ್ಣ ತೊಗಶಿಮಠ, ಟಿ.ಸಿ. ಪಾಟೀಲ, ಎಲ್.ಜಿ. ಶೆಟ್ಟರ್, ಮಹೇಶ್ ಅಡಿವೆಪ್ಪನವರ, ಜಯಣ್ಣ ಮುಚಡಿ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕು. ಗಾನವಿ ಪ್ರಾರ್ಥಿಸಿದರು. ಶಿಕ್ಷಕಿ ಮಂಜುಳಾ ಕಬ್ಬೂರ ಸ್ವಾಗತಿಸಿದರು. ಪ್ರಭುಲಿಂಗಪ್ಪ ಹಲಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಆರಿ್ವ. ಸುರಗೊಂಡ ಕಾರ್ಯಕ್ರಮ ನಿರೂಪಿಸಿದರು. ಎಂ.ಎಚ್. ಪಾಟೀಲ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 