ಅತಿಯಾದ ರಾಸಾಯನಿಕ ರಸಗೊಬ್ಬರಗಳ ಬಳಕೆ ಕೃಷಿಗೆ ಮಾರಕ: ಡಾ.ರವಿ ಎಸ್
Excessive use of chemical fertilizers is fatal to agriculture: Dr. Ravi S.
ರೂಪನಗುಡಿಯಲ್ಲಿ ‘ಖೇತ್ ಬಜಾವೋ ಅಭಿಯಾನ’
ಬಳ್ಳಾರಿ 10: ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣು ತನ್ನ ನೈಸರ್ಗಿಕ ಸೂಕ್ಷ್ಮಜೀವಿಗಳನ್ನು ಕಳೆದುಕೊಂಡು ಗಟ್ಟಿಯಾಗುತ್ತಿದ್ದು, ಇದು ಕೃಷಿ ವಲಯಕ್ಕೆ ಮಾರಕವಾಗಿದೆ ಎಂದು ಹಗರಿಯ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ರವಿ ಎಸ್. ಅವರು ಆತಂಕ ವ್ಯಕ್ತಪಡಿಸಿದರು.ಬಳ್ಳಾರಿ ತಾಲ್ಲೂಕಿನ ರೂಪನಗುಡಿ ಗ್ರಾಮದಲ್ಲಿ ಕೃಷಿ ಭೂಮಿಗಳ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿಯ ಮಹತ್ವದ ಕುರಿತು ಬುಧವಾರ ಹಮ್ಮಿಕೊಳ್ಳಲಾಗಿದ್ದ ‘ಖೇತ್ ಬಜಾವೋ ಅಭಿಯಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಣ್ಣು ಒಟ್ಟು 14 ಅತ್ಯಗತ್ಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ರೈತರು ತಮ್ಮ ಜಮೀನಿನ ಮಣ್ಣನ್ನು ಕಡ್ಡಾಯವಾಗಿ ಪರೀಕ್ಷಿಸಿ, ಅದರಲ್ಲಿ ಯಾವ ಪೋಷಕಾಂಶಗಳ ಕೊರತೆಯಿದೆ ಎಂಬುದನ್ನು ಅರಿತು, ಅದಕ್ಕೆ ತಕ್ಕಂತೆ ಮಾತ್ರ ಗೊಬ್ಬರಗಳನ್ನು ಬಳಸಬೇಕು. ಸಮತೋಲಿತ ಮತ್ತು ಹಿತಮಿತವಾದ ಗೊಬ್ಬರ ಬಳಕೆಯಿಂದ ಮಣ್ಣಿನ ಆರೋಗ್ಯ ರಕ್ಷಿಸುವುದಲ್ಲದೆ, ಕೃಷಿ ವೆಚ್ಚವನ್ನೂ ಕಡಿಮೆ ಮಾಡಿಕೊಳ್ಳಬಹುದು ಎಂದು ರೈತರಿಗೆ ಸಲಹೆ ನೀಡಿದರು.ಕೃಷಿ ವಿಸ್ತರಣೆ ವಿಜ್ಞಾನಿ ಡಾ.ನವೀನ್ ಕುಮಾರ್ ಪಿ. ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರೈತರು ನಕಲಿ ಬೀಜ ಮತ್ತು ರಾಸಾಯನಿಕಗಳ ವಿಚಾರದಲ್ಲಿ ಮೋಸ ಹೋಗುತ್ತಿರುವುದು ಹೆಚ್ಚಾಗುತ್ತಿದೆ. ಇದನ್ನು ತಡೆಯಲು ರೈತರು ತಾವು ಖರೀದಿಸುವ ಬೀಜ, ಗೊಬ್ಬರ ಹಾಗೂ ರಾಸಾಯನಿಕಗಳಿಗೆ ಕಡ್ಡಾಯವಾಗಿ ಅಧಿಕೃತ ರಸೀದಿಯನ್ನು ಪಡೆದುಕೊಳ್ಳಬೇಕು ಎಂದು ರೈತರಿಗೆ ಮನವರಿಕೆ ಮಾಡಿಕೊಟ್ಟರು.ಕಾರ್ಯಕ್ರಮದಲ್ಲಿ ರೂಪನಗುಡಿಯ ಕೃಷಿ ಅಧಿಕಾರಿ ಗಾಯಿತ್ರಿ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಂಬಣ್ಣ, ಬಳ್ಳಾರಿಯ ‘ಆತ್ಮ’ ಯೋಜನೆಯ ಉಪ ಯೋಜನಾ ನಿರ್ದೇಶಕಿ ಕವಿತಾ, ರೂಪನಗುಡಿ ಜಿ.ಪಂ ಮಾಜಿ ಅಧ್ಯಕ್ಷ ನಾಗರಾಜು, ಕೃಷಿಕ ಸಮಾಜದ ತಾಲ್ಲೂಕು ನಿರ್ದೇಶಕ ಗೋಪಾಲ ರೆಡ್ಡಿ (ಲಿಂಗದೇವನಹಳ್ಳಿ) ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸುಮಾರು 150ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ಭಾಗವಹಿಸಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 