ಗದಗದಲ್ಲಿ ವಿಪತ್ತು ನಿರ್ವಹಣೆಯ ರೋಚಕ ಪ್ರಾತ್ಯಕ್ಷಿಕೆ “ವಿಪತ್ತಿನ ವೇಳೆ ಗಾಬರಿ ಬೇಡ, ಜಾಗೃತಿ ಬೇಕು”
Exciting demonstration of disaster management in Gadag: “Don't panic during disasters, awareness is
ಗದಗ 18: ವಿಪತ್ತು ಸಂಭವಿಸಿದಾಗ ಕ್ಷಣಾರ್ಧದಲ್ಲೇ ಸರಿಯಾದ ಕ್ರಮ ಕೈಗೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ಜನರಿಗೆ ಮನದಟ್ಟು ಮಾಡುವ ಉದ್ದೇಶದಿಂದ ವಿಪತ್ತು ನಿರ್ವಹಣಾ ಪ್ರಾತ್ಯಕ್ಷಿಕೆಯನ್ನು ಬುಧವಾರದಂದು ಗದುಗಿನ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮ ಜನರಲ್ಲಿ ವಿಶೇಷ ಆಸಕ್ತಿ ಮೂಡಿಸಿತು.ಪ್ರಾತ್ಯಕ್ಷಿಕೆಯ ಪ್ರಮುಖ ಆಕರ್ಷಣೆ ಎಂದರೆ ಕಮಲೇಶ್ ಸಿಂಗ್ ನೇತೃತ್ವದ ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡದ ಕಾರ್ಯಚಟುವಟಿಕೆ.
ಜಿಲ್ಲಾಸ್ಪತ್ರೆಯ ಒಂದು ಭಾಗದಲ್ಲಿ ಕಟ್ಟಡ ಕುಸಿದಂತ ಅಣಕು ಪರಿಸ್ಥಿತಿ ನಿರ್ಮಿಸಿ, ಅದರೊಳಗೆ ಸಿಲುಕಿರುವವರನ್ನು ರಕ್ಷಿಸುವ ಕಾರ್ಯವನ್ನು ನೈಜ ರೀತಿಯಲ್ಲಿ ಪ್ರದರ್ಶಿಸಲಾಯಿತು.ತಂಡವು ವಿಶೇಷ ಸಾಧನಗಳನ್ನು ಬಳಸಿ ಅವಶೇಷಗಳೊಳಗಿನ ಜೀವಂತ ವ್ಯಕ್ತಿಗಳನ್ನು ಪತ್ತೆಹಚ್ಚುವುದು, ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸಾಗಿಸುವ ಕ್ರಮಗಳನ್ನು ಹಂತ ಹಂತವಾಗಿ ತೋರಿಸಿತು. ಪ್ರತಿ ಹಂತದಲ್ಲೂ ಸಮಯ ನಿರ್ವಹಣೆ ಮತ್ತು ತಂಡದ ಸಂಯೋಜನೆ ಎಷ್ಟು ಮುಖ್ಯ ಎಂಬುದನ್ನು ಸ್ಪಷ್ಟಪಡಿಸಲಾಯಿತು.ಇದರ ಜೊತೆಗೆ, ಪ್ರಾತ್ಯಕ್ಷಿಕೆ ವೇಳೆ ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳನ್ನು ನೀಡಲಾಯಿತು.
ಕಟ್ಟಡ ಕುಸಿದಾಗ ಗಾಬರಿಯಾಗದೆ ಸುರಕ್ಷಿತ ಸ್ಥಳಕ್ಕೆ ಸರಿಯುವುದು. ತಕ್ಷಣ ತುರ್ತು ಸೇವೆಗಳಿಗೂ ಮಾಹಿತಿ ನೀಡುವುದು. ಅವಶೇಷಗಳ ಬಳಿ ಅನಗತ್ಯವಾಗಿ ಗುಂಪಾಗದೆ ರಕ್ಷಣಾ ಕಾರ್ಯಕ್ಕೆ ಸಹಕರಿಸುವುದು. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲ ವಿಧಾನಗಳ ಕುರಿತು ವಿವರಿಸಲಾಯಿತು.ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು.
ವಿದ್ಯಾರ್ಥಿಗಳಿಗೆ ಇದು ನೈಜ ಕಲಿಕೆಯ ಮಹತ್ವದ ಅನುಭವವಾಗಿತ್ತು.ಈ ಕಾರ್ಯಕ್ರಮದ ಮೂಲಕ “ವಿಪತ್ತು ಬಂದಾಗ ಮಾತ್ರ ಸಿದ್ಧರಾಗುವುದಕ್ಕಿಂತ ಮುಂಚೆಯೇ ಜಾಗೃತರಾಗಬೇಕು” ಎಂಬ ಸಂದೇಶವನ್ನು ಜಿಲ್ಲಾಡಳಿತ ಹಾಗೂ ಎನ್ ಡಿ ಆರ್ ಎಪ್ ಸ್ಪಷ್ಟವಾಗಿ ಸಾರಿತು.ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಾರ್ಯಕ್ರಮದಲ್ಲಿ ಮಾತನಾಡಿ, “ವಿಪತ್ತುಗಳು ಯಾವಾಗ ಬೇಕಾದರೂ ಸಂಭವಿಸಬಹುದು.
ಆದರೆ ಅದಕ್ಕೆ ನಾವು ಸಿದ್ಧರಾಗಿದ್ದರೆ ನಷ್ಟವನ್ನು ಕಡಿಮೆ ಮಾಡಬಹುದು. ಜೀವ ಹಾನಿ ತಡೆಯಬಹುದು ಇದರಲ್ಲಿ ಸಾರ್ವಜನಿಕರ ಸಹಕಾರವೂ ಅಷ್ಟೇ ಮುಖ್ಯ” ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರೆಗೌಡ್ರ, ಪ್ರಾಚಾರ್ಯ ರೇಖಾ ಸೇನಾವಣೆ, ವಿಪತ್ತು ತಜ್ಞ ಶಿವಾನಂದ ರಾಜನಾಳ,
ವಸಂತ ಮಡ್ಲೂರ, ಎನ್ ಡಿ ಆರ್ ಎಫ್ ಮುಖ್ಯಸ್ಥ ಕಮಲೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.ಬಾಕ್ಸ್ :ತುರ್ತು ಸಾಮಗ್ರಿಗಳ ಸರಿಯಾದ ಬಳಕೆ ಸಂದರ್ಭಗಳಲ್ಲಿ ಬಳಸುವ ಸಾಮಗ್ರಿಗಳ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಹಾಗೂ ಉಪಯುಕ್ತ ಮಾಹಿತಿ ನೀಡಲಾಯಿತು. ಎನ್ಡಿಆರ್ಎಫ್ ತಂಡವು ರಕ್ಷಣಾ ಕಾರ್ಯಗಳಲ್ಲಿ ಬಳಸುವ ವಿವಿಧ ಸಾಧನಗಳನ್ನು ಪರಿಚಯಿಸಿ, ಅವುಗಳನ್ನು ಯಾವ ಸಂದರ್ಭದಲ್ಲಿ ಹೇಗೆ ಬಳಸಬೇಕು
ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿತು. ಮುಖ್ಯವಾಗಿ ಸ್ಟ್ರೆಚರ್, ಕಟಿಂಗ್ ಟೂಲ್ಗಳು, ರೋಪ್ಗಳು, ಲೈಫ್ ಡಿಟೆಕ್ಷನ್ ಸಾಧನಗಳು ಸೇರಿದಂತೆ ಹಲವಾರು ಉಪಕರಣಗಳ ಬಳಕೆ ಕುರಿತು ವಿವರಿಸಲಾಯಿತು.ಇದಲ್ಲದೆ, ಮನೆಮಟ್ಟದಲ್ಲೇ ತುರ್ತು ಕಿಟ್ ಸಿದ್ಧವಾಗಿಟ್ಟುಕೊಳ್ಳುವ ಮಹತ್ವವನ್ನು ವಿವರಿಸಿ, ಅದರಲ್ಲಿ ಟಾರ್ಚ, ಪ್ರಾಥಮಿಕ ಚಿಕಿತ್ಸೆ ಪೆಟ್ಟಿಗೆ, ಕುಡಿಯುವ ನೀರು, ಅಗತ್ಯ ಓಷಧಿಗಳು ಹಾಗೂ ಸಂಪರ್ಕ ಸಂಖ್ಯೆಗಳ ಪಟ್ಟಿಯನ್ನು ಇರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 