ಪ್ರತಿಬಂಧಕಾಜ್ಞೆ ಜಾರಿ
Execution of restraining order
ಪ್ರತಿಬಂಧಕಾಜ್ಞೆ ಜಾರಿ
ಗದಗ 07 : ಜವಾಹರ ನವೋದಯ ವಿದ್ಯಾಲಯದ 9 ಮತ್ತು 11 ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗಳು ಫೆಬ್ರುವರಿ 8 ರಂದು ಜರುಗಲಿವೆ. ಸದರಿ ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯ 02ಪರೀಕ್ಷಾ ಕೇಂದ್ರಗಳದಾ ಮುಂಡರಗಿ ತಾಲೂಕಿನಲ್ಲಿರುವ ಜವಾಹರ ನವೋದಯ ವಿದ್ಯಾಲಯ ಕೊರ್ಲಹಳ್ಳಿ ಮತ್ತು ಮುಂಡರಗಿ ತಾಲೂಕಿನ ಎಂ ಎಸ್ ಡಂಬಳ ಬಾಲಕಿಯರ ಪ್ರೌಢ ಶಾಲೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಫೆಬ್ರುವರಿ 8 ರಂದು ಬೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ ಅಂಗಡಿ, ಬುಕ್‌ಸ್ಟಾಲ್, ಫೋಟೋ ಕಾಪಿಯರ‌್ಗಳನ್ನು ಬಂದ್ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ , ಸೇರಿದಂತೆ ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಹಾಗೂ ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ , ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿ.ಎನ್ ಶ್ರೀಧರ ಅವರು ಆದೇಶಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 