ಬಸ್ ಪ್ರಯಾಣ ದುಬಾರಿ ಖಂಡನೆ
ಹೂವಿನಹಡಗಲಿ. 03 : ರಾಜ್ಯ ಸರ್ಕಾರ ಶೇ 15 ರಷ್ಟು ಬಸ್ ದರ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದೆ.ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ ತಮ್ಮ ಸಾವಿರಾರು ಕೋಟಿ ರೂಪಾಯಿಗಳ ಆಸ್ತಿಯನ್ನು ಮಾರಾಟ ಮಾಡಿ ಗ್ಯಾರಂಟಿ ಯೋಜನೆಗೆ ಹಣ ನೀಡಲಿ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಮುಖಂಡ ಎಂ ಬಿ ಬಸವರಾಜ ಆಗ್ರಹಿಸಿದರು. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ರಾಜ್ಯದ ಖಜಾನೆಯನ್ನು ಬರಿದು ಮಾಡಿ ಬಡ ದುಡಿಯುವ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ನೀಡಿದೆ.ಶಕ್ತಿ ಗ್ಯಾರಂಟಿ ಯೋಜನೆಯಿಂದ ರಾಜ್ಯ ಸಾರಿಗೆ ನಿಗಮಗಳನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರ ಜನರ ಜೀವನದ ಜೋತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. ಸದ್ಯಕ್ಕೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ.ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ವಿರುದ್ಧ ರೋಸಿ ಹೋಗಿದ್ದಾರೆ ಬರಿ ಭ್ರಷ್ಟಾಚಾರದಲ್ಲೇ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ತಮ್ಮ ಕುರ್ಚಿಗಾಗಿಯೇ ಕಾದಾಟ ನಡೆಸಿದ್ದಾರೆ.ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ನವರು ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಯನ್ನೇ ತಮ್ಮ ಅಭಿವೃದ್ಧಿ ಎಂದು ಬಿಂಬಿಸಿಕೋಳ್ಳುವ ರಾಜ್ಯ ಸರ್ಕಾರ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಜನರಿಗೆ ದುಬಾರಿ ದುನಿಯಾ ಮಾಡಿ ಜನತೆಯನ್ನು ಕಷ್ಟಕ್ಕೆ ಸಿಲುಕಿಸಿದ್ದಾರೆ. ಎಂದು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.