ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರು ಸಾವು
Explosion at chemical factory: Two workers killed
ಮಂಡ್ಯ 15: ಭಾನುವಾರ ಕಾರೆಕಟ್ಟೆ ಗ್ರಾಮದ ಬಳಿಯ ಕೀರ್ತಿ ಕೆಮಿಕಲ್ಸ್ ಇಂಡಸ್ಟ್ರೀಸ್ ಕಾರ್ಖಾನೆಯೊಂದರಲ್ಲಿ ರಾಸಾಯನಿಕ ಸಂಗ್ರಹಣಾ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸಾವೀಗೀಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಸಾಯನಿಕ ಕಾರ್ಖಾನೆಯನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲಕ ಕಾರ್ಮಿಕರು ಸ್ಥಳದಲ್ಲೇ ಸಾವೀಗೀಡಾಗಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವೀಗೀಡಾಗಿದ್ದು, ಗಾಯಾಳುಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.
ಕೆಲವು ಸಮಯದಿಂದ ಕಾರೆಕಟ್ಟೆಯಿಂದ ಈ ಘಟಕದ ಸಾಮಗ್ರಿಗಳನ್ನು ಹೊಸ ಸ್ಥಳಕ್ಕೆ ಸಾಗಿಸುವ ಪ್ರಕ್ರಿಯೆಯಲ್ಲಿತ್ತು ಮತ್ತು ಭಾನುವಾರ ರಾಸಾಯನಿಕ ಟ್ಯಾಂಕ್ ಅನ್ನು ತೆರವುಗೊಳಿಸುತ್ತಿದ್ದಾಗ ಅವಘಡ ಸಂಭವಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2022ರಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಹತ್ತಿರದ ಪ್ರದೇಶಗಳಲ್ಲಿ ಬೆಳೆಗಳಿಗೆ ಹಾನಿಯಾಗಿ, ಎರಡು ನಾಯಿಗಳು ಸಾವೀಗೀಡಾಗಿದ್ದವು. ಇದು ಹತ್ತಿರದಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರಿತು. ಇದನ್ನು ಉಲ್ಲೇಖಿಸಿ ಸ್ಥಳೀಯರು ಕಾರ್ಖಾನೆಯ ಸುರಕ್ಷತಾ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ರೈತರು ಮತ್ತು ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ನಂತರ, ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಮಧ್ಯಪ್ರವೇಶದಿಂದ ಕಾರ್ಖಾನೆಯ ಕಾರ್ಯಾ ಚರಣೆ ಸ್ಥಗಿತಗೊಂಡಿತು.
ಬಳಿಕ ಮಾಲೀಕರು ಕಾರ್ಖಾನೆ ಯನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದರು ಎಂದು ವರದಿಯಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 