ಲಾಕ್‌ಡೌನ್ ವಿನಾಯಿತಿಯನ್ನು ರಾಮನಗರಕ್ಕೂ ವಿಸ್ತರಿಸಿ: ಎಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ಏ.30, ಕೊರೊನಾ ವೈರಸ್ ಮುಕ್ತವಾಗಿರುವ ಜಿಲ್ಲೆಗಳಲ್ಲಿ ನೀಡಿರುವ ಲಾಕ್‌ಡೌನ್ ವಿನಾಯಿತಿಯನ್ನು ತಕ್ಷಣವೇ ರಾಮನಗರ ಜಿಲ್ಲೆಗೂ ಅನ್ವಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಕಾರ್ಯದರ್ಶಿಯವರಿಗೆ ಟ್ವೀಟ್ ಮೂಳಕ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರಿಸಿದರೂ, 9 ಜಿಲ್ಲೆ ಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 