ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಮಕ್ಕಳ ಸಮಗ್ರ ಕಲಿಕೆಗೆ ಸ್ಫೂರ್ತಿ: ಗಂಗಪ್ಪ
Extracurricular activities along with the curriculum inspire children's holistic learning: Gangappa
ಕೊಪ್ಪಳ 27: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸಿದಾಗ ಮಾತ್ರ ಅದು ಮಕ್ಕಳ ಸಮಗ್ರವಾದ ಕಲಿಕೆಯಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಗಂಗಪ್ಪ ಹೇಳಿದರು.
ಬೆಂಗಳೂರು ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಬಾಲ ಭವನ ಸಮಿತಿ ಇವರ ಸಹಯೋಗದಲ್ಲಿ ಸೋಮವಾರ ಕೊಪ್ಪಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ 2025-26ನೇ ಸಾಲಿನ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ 15 ದಿನಗಳ ಕಾಲ ಚಿತ್ರಕಲೆ, ಜೇಡಿಮಣ್ಣಿನ ಕಲೆ, ಕರಕುಶಲ, ಕರಾಟೆ, ಯೋಗ, ಸಮೂಹ ಸಂಗೀತ ಮತ್ತು ಸಮೂಹ ನೃತ್ಯ ಇಂತಹ ಹಲವಾರು ವಿವಿಧ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಿದ್ದು, ಇಂದು ಆ ಎಲ್ಲಾ ಕಲೆಗಳ ಪ್ರದರ್ಶನ ದಿನವಾಗಿದೆ. ನಂತರ ಮಕ್ಕಳು 15 ದಿನಗಳಲ್ಲಿ ಉತ್ತಮ ರೀತಿಯಲ್ಲಿ ಕಲಿತುಕೊಂಡಿರುವುದು ನಮ್ಮೆಲ್ಲರಿಗೂ ಸಂತೋಷದ ವಿಷಯವೆಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಅವರು ಮಕ್ಕಳಿಗೆ ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿವೆ, ಮಕ್ಕಳು ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕೊಪ್ಪಳ ಯುನಿಸೆಫ್ ಸಂಯೋಜಕರಾದ ಹರೀಶ ಜೋಗಿ ಮಾತನಾಡಿ, ಮಕ್ಕಳಿಗೆ ಈ ಬೇಸಿಗೆ ಶಿಬಿರದಲ್ಲಿ ಕಲಿಸಿದ ಸಂಪನ್ಮೂಲ ವ್ಯಕ್ತಿಗಳಿಗೆ ಹಾಗೂ ತಂದೆ ತಾಯಿಗಳಿಗೆ ಚಪ್ಪಾಳೆ ಮೂಲಕ ಅಭಿನಂದನೆ ಸಲ್ಲಿಸಲು ತಿಳಿಸಿದರು. ಹಾಗೂ ಈ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಯೋಜನೆ ಮಾಡಿ ಮಕ್ಕಳಿಗೆ ಉತ್ತಮ ಅವಕಾಶ ಕಲ್ಪಿಸಿ ಕೊಟ್ಟಿರುವ ಬೆಂಗಳೂರು ರಾಜ್ಯ ಬಾಲ ಭವನ ಸೊಸೈಟಿಗೆ ಹಾಗೂ ಇಲಾಖೆಯ ಸಿಬ್ಬಂದಿಗಳಿಗೆ ಧನ್ಯವಾದಗಳನ್ನ ಹೇಳಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ, ಗಂಗಾವತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಆರ್, ಕೊಪ್ಪಳ ಜಿಲ್ಲೆಯ ವೃತ್ತಿ ಶಿಕ್ಷಣ ಶಿಕ್ಷಣ ಇಲಾಖೆಯ ವಿಷಯ ಪರೀಕ್ಷಕರಾದ ವೀಣಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ದಿವ್ಯಜೋತಿ, ಮಂಗಳ, ಯಮನೂರ್ಪ ಹಾಗೂ ಸಂಪನ್ಮೂಲ ವ್ಯಕ್ತಿಗಳು, ವಿವಿಧ ಶಾಲೆಯ ಮಕ್ಕಳು, ಸರಕಾರಿ ಬಾಲಕರ ಬಾಲಮಂದಿರ, ಸರಕಾರಿ ಬಾಲಕಿಯರ ಬಾಲ ಮಂದಿರದ ಮಕ್ಕಳು ಪಾಲಕರು ಪೋಷಕರು ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಿದ್ದಪ್ಪ ಕುರಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಬಾಲ ಭವನ ಸಂಯೋಜಕ ಮೆಹಬೂಬಸಾಬ ಇಲಾಹಿ ಸ್ವಾಗತಿಸಿದರು. ಪ್ರಮೋದ್ ಕುಮಾರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 