ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ
Extracurricular activities are essential for the all-round development of students
ಸವದತ್ತಿ 20 : ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸರ್ವಾಂಗೀಣ ಅಭಿವೃದ್ಧಿಗೆ ಅತ್ಯಗತ್ಯ ಎಂದು ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅಭಿಪ್ರಾಯಪಟ್ಟರು. ನಗರದ ಜಿ.ಜಿ. ಚೋಪ್ರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಎನ್.ಎಸ್.ಎಸ್. ವಾರ್ಷಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ನಿರ್ಮಿಸುವ ಬುನಾದಿಯಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಯತ್ತ ಮಾತ್ರ ಗಮನಹರಿಸದೆ, ಎನ್.ಎಸ್.ಎಸ್.ನಂತಹ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಮಾಜದ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿಮ್ಮಲ್ಲಿ ನಾಯಕತ್ವ ಗುಣ ಮತ್ತು ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುತ್ತವೆ. ಇವುಗಳನ್ನು ಸಮರ್ಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಕಾಲೇಜಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 