ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ
FAQ Support Price for the purchase of quality safflower seed
ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ
ಗದಗ 17 : 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆ0ು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 5 ಕ್ವಿಂಟಲ್ ನಂತೆ ಗರಿಷ್ಟ 20 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಹಾಗೂ ಕುಸುಬೆ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕುಸುಬೆ ಖರೀಧಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾದಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಕೃಷಿ ಮಾರಾಟ ಇಲಾಖೆ0ು ಸಹಾ0ುಕ ನಿರ್ದೇಶಕರು ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್‌ಗೆ ರೂ.5940/-ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶ ದಿನಾಂಕ 11-3-2024 ರನುಸಾರ ನ್ಯಾಪೆಡ್ ಸಂಸ್ಥೆ0ುನ್ನು ಕೇಂದ್ರದ ಖರೀದಿ ಏಜೆನ್ಸಿ0ಾಗಿ ಮತ್ತು ಕರ್ನಾಟಕ ಸಹಕಾರ ಎಣ್ಣೆ ಬೀಜಬೆಳೆಗಾರರ ಮಹಾಮಂಡಳಿ ನಿ0ುಮಿತ ( ಕೆಓಎಫ್ ) ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಿದ್ದು ರೈತರು ನೋಂದಣಿ ಕಾಲಾವಧಿ0ುನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿ0ೆು0ುನ್ನು ಜರುಗಿಸಲಾಗುವುದು. ಜಿಲ್ಲೆ0ು 9 ಕಡೆ ಖರೀದಿ ಕೇಂದ್ರಗಳನ್ನು ತೆರೆ0ುಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ , ಸಹಕಾರಿ ಸಂಘಗಳ ಇಲಾಖೆ0ು ಅಧಿಕಾರಿಗಳು, ಕೆ.ಓ.ಎಫ್. ವ್ಯವಸ್ಥಾಪಕರು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 