ಖಾಲಿ ಹುದ್ದೆ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ: ಬಿ.ಸಿ.ಪಾಟೀಲ್

ಬೆಂಗಳೂರು,  ಮಾ 9,ಕೃಷಿ ಇಲಾಖೆಯ ಗ್ರೂಪ್ ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ  ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಹಾಗೂ ಮುಂಬಡ್ತಿ ಕೋಟಾದಡಿ  ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ  ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್  ವಿಧಾನಸಭೆಗಿಂದು ತಿಳಿಸಿದ್ದಾರೆ.

 ಸೋಮವಾರ ಜೆಡಿಎಸ್ ನ ಸದಸ್ಯ ಎಚ್.ಡಿ.ರೇವಣ್ಣ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ  ಲಿಖಿತ ಮೂಲಕ ಉತ್ತರಿಸಿರುವ ಸಚಿವರು, ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ  ಪ್ರಭಾರದಲ್ಲಿರಿಸಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾದ  ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. 2018-19 ನೇ ಸಾಲಿನಲ್ಲಿ ಗ್ರೂಪ್-ಎ  ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ  ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ  ಮಾಡಲಾಗುವುದು. ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ಕೃಷಿ ಇಲಾಖೆಯಲ್ಲಿ 3640 ಹುದ್ದೆಗಳು  ಖಾಲಿಯಿದ್ದು, ಯ 2018-19 ನೇ ಸಾಲಿನಲ್ಲಿ ಗ್ರೂಪ್ ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ  ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ  ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.