ಬೆಂಗಳೂರು 03: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿದ್ದಾರೆಂದು ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಜೆಪಿ ನಡ್ಡಾ, ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ನ್ನು ಹೈಕೋರ್ಟ್ ರದ್ದು ಮಾಡಿದೆ.
ಎಫ್ ಐಆರ್ ನಲ್ಲಿ ತನ್ನ ಹೆಸರಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಎಫ್ಐಆರ್ ರದ್ದುಪಡಿಸಿದೆ.
ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಜೆ ಪಿ ನಡ್ಡಾ ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.