ಆಕಸ್ಮಿಕ ಬೆಂಕಿ ತಗುಲಿ ತಂದೆ-ಮಗ ಸಾವು

ಮೈಸೂರು, ಫೆ.14 ,ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ  ಘಟನೆ ಮೈಸೂರಿನಲ್ಲಿ ನಡೆದಿದೆ.ಮೈಸೂರಿನ ಈಶ್ವರ ಬಡಾವಣೆಯಲ್ಲಿ ಗುರುವಾರ ತಡರಾತ್ರಿ ಈ ದುರಂತ ಸಂಭವಿಸಿದೆ.ಘಟನೆಯಲ್ಲಿ  ತಂದೆ ರೇಣುಕಾಸ್ವಾಮಿ ಮತ್ತು ಮಗ ತೇಜಸ್  ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ  ಮೃತಪಟ್ಟರೇ, ಪತ್ನಿ ಪುಷ್ಪಲತಾ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸದ್ಯ ಗಾಯಾಳು ಪುಷ್ಪಲತಾ ಅವರಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮೃತ ರೇಣುಕಾಸ್ವಾಮಿ ಸಶಸ್ತ್ರ ಮೀಸಲು ಪಡೆಯ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.  ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.