ವಿಶ್ವದರ್ಜೆಯ ಸಂಶೋಧನೆಗೆ ಸಾಂಪ್ರದಾಯಕ ಜ್ಞಾನ, ಆಧುನಿಕ ವಿಜ್ಞಾನದ ಬಳಕೆ ಅಗತ್ಯ; ಮೋದಿ
ನವದೆಹಲಿ, ಫೆ 15 : ವಿಜ್ಞಾನಿಗಳು ವಿಶ್ವದರ್ಜೆಯ ಉತ್ಪನ್ನಗಳನ್ನು ತಯಾರಿಸಲು ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ವಿಜ್ಞಾನವನ್ನು ಸಮನಾಗಿ ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶನಿವಾರ ದೆಹಲಿಯಲ್ಲಿ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು (ಸಿಎಸ್ ಐಆರ್ ) ಸಭೆಯ ಅಧ್ಯಕ್ಷತೆ ವಹಿಸಿದ ಮೋದಿ, ವಿಜ್ಞಾನಿಗಳು 5 ಜಿ, ಕೃತಕ ಬುದ್ಧಿಮತ್ತೆಯಂತಹ ಸವಾಲುಗಳು ಮತ್ತು ನವೀಕರಿಸಬಹುದಾದ ಇಂಧನಕ್ಕೆ ಅಗತ್ಯವಿರುವ ಸುಸ್ಥಿರ ಹಾಗೂ ಕಡಿಮೆ ದರದ ಬ್ಯಾಟರಿಗಳ ಮೇಲೆ ಹೆಚ್ಚಿನ ಗಮನಹರಿಸಬೇಕು ಎಂದು ಕರೆ ನೀಡಿದರು.
ದೇಶದ ಸಾಮಾನ್ಯ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಭವಿಷ್ಯದ ರೂಪುರೇಷೆ ತಯಾರಿಸಬೇಕು. ವಿಜ್ಞಾನಿಗಳು ಭಾರತದ ಅಗತ್ಯಗಳು ಮತ್ತು ಅಪೌಷ್ಠಿಕತೆ, ನೀರು ಸಂರಕ್ಷಣೆಯಂತಹ ಸಾಮಾಜಿಕ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂದು ಮೋದಿ ಸಲಹೆ ನೀಡಿದರು.
ವಿಜ್ಞಾನ ಕ್ಷೇತ್ರದತ್ತ ಹೆಚ್ಚಿನ ಯುವಜನತೆಯನ್ನು ಆಕರ್ಷಿಸುವ ಅಗತ್ಯವಿದೆ ಎಂದ ಮೋದಿ, ದೇಶದ ವಿವಿಧೆಡೆ ನೆಲೆಸಿರುವ ಭಾರತಿಯರೊಂದಿಗೆ ಕೈಜೋಡಿಸಿ ಸಂಶೋಧನೆ ಮತ್ತು ಅಭಿವೃದ್ಧಿ ಕೆಲಸಗಳನ್ನು ಹೊಸ ದಿಕ್ಕಿನೆಡೆ ಕೊಂಡೊಯ್ಯಬೇಕು ಎಂದು ಮೋದಿ ಕರೆ ನೀಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 