ಎಫ್ಪಿಎಐ ಸಂಸ್ಥಾಪನಾ ದಿನಾಚರಣೆ: ಆರೋಗ್ಯ ಕ್ಷೇತ್ರದ ಸಾಧಕರಿಗೆ ಸನ್ಮಾನ
FPAI Foundation Day Celebration: Felicitation of Achievers in the Healthcare Sector
ಲೋಕದರ್ಶನ ವರದಿ
ಬೆಳಗಾವಿ, ಜು. 30: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ (ಎಫ್ಪಿಎಐ) ಸಂಸ್ಥೆಯ 77ನೇ ಸಂಸ್ಥಾಪನಾ ದಿನ ಹಾಗೂ ಎಫ್ಪಿಎಐ ಬೆಳಗಾವಿ ಶಾಖೆಯ 53ನೇ ಸಂಸ್ಥಾಪನಾ ದಿನವನ್ನು ಗುರುವಾರ ಶಾಖೆಯ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವು ಬಿ.ಎಸ್.ಸಿ. ಸದಸ್ಯರಾದ ಮೋಹನ ಗುಂಡ್ಲೂರ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಗಣ್ಯರು ದೀಪ ಬೆಳಗಿಸಿ ಹಾಗೂ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಸುಶೀಲಾ ಸಾಯನ್ನವರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಗಣ್ಯರನ್ನು ಎಫ್ಪಿಎಐ ಬೆಳಗಾವಿ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಫ್ಪಿಎಐ ಬೆಳಗಾವಿ ಶಾಖೆಯ ಅಧ್ಯಕ್ಷೆ ಡಾ. ವಿನೋದಾ ಸಿ. ಬಾವಡೆಕರ್ ಮಾತನಾಡಿ, 1949ರಲ್ಲಿ ಶ್ರೀಮತಿ ಧನವಂತಿ ರಾಮಾರಾವ ಹಾಗೂ ಅವಾಬಾಯಿ ವಾಡಿಯಾ ಅವರು ಎಫ್ಪಿಎಐ ಸಂಸ್ಥೆಯನ್ನು ಸ್ಥಾಪಿಸಿ, ನಿರ್ಗತಿಕರು, ಬಡವರು, ಹಿಂದುಳಿದವರು ಹಾಗೂ ಮಹಿಳೆಯರು ಮತ್ತು ಯುವಜನರ ಸಮಗ್ರ ಲೈಂಗಿಕ ಮತ್ತು ಪ್ರಜನನ ಆರೋಗ್ಯ ಹಕ್ಕುಗಳಿಗಾಗಿ ಸೇವೆ ಆರಂಭಿಸಿದರು ಎಂದು ಸ್ಮರಿಸಿದರು.
ಬೆಳಗಾವಿ ಶಾಖೆಯು ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಟುಂಬ ನಿಯೋಜನೆ, ಎಚ್ಐವಿ/ಏಡ್ಸ್ ಜಾಗೃತಿ ಮತ್ತು ಪರೀಕ್ಷೆ, ಗರ್ಭಕೋಶದ ಕೊರಳಿನ ಕ್ಯಾನ್ಸರ್ ತಪಾಸಣೆ, ಹದಿಹರೆಯದ ಶಿಕ್ಷಣ ಹಾಗೂ ಶಾಲಾ-ಕಾಲೇಜುಗಳಲ್ಲಿ ಸಮಗ್ರ ಲೈಂಗಿಕ ಶಿಕ್ಷಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದು ಅವರು ತಿಳಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಸುಶೀಲಾ ಸಾಯನ್ನವರ, ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕುಟುಂಬ ನಿಯೋಜನೆ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಫ್ಪಿಎಐ ಬೆಳಗಾವಿ ಶಾಖೆಯ ಆರೋಗ್ಯ ಸೇವೆ ಹಾಗೂ ಜನಜಾಗೃತಿ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಫ್ಪಿಎಐ ಬೆಳಗಾವಿ ಶಾಖೆಯ ವ್ಯವಸ್ಥಾಪಕ ಗೋವಿಂದರಾವ ಜಿ. ಕುಲಕರ್ಣಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಜನರಲ್ ಬಾಡಿ ಸದಸ್ಯರು, ಬಿ.ಎಸ್.ಸಿ. ಸದಸ್ಯರು, ಯುವ ಸದಸ್ಯರು ಹಾಗೂ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 