ಹಾವಿನ ಕಡಿತದ ಓಷಧ ಲಭ್ಯತೆ ಕುರಿತು ಸುಳ್ಳು ಸುದ್ದಿ : ಕಿವಿಗೊಡಬೇಡಿ
False news regarding the availability of snakebite medication: Do not pay heed to it
ವಿಜಯನಗರ(ಹೊಸಪೇಟೆ) 21 : ಸಾಮಾಜಿಕ ಜಾಲತಾಣಗಳಲ್ಲಿ ಹಾವಿನ ಕಡಿತಕ್ಕೆ 108 ಆಂಬುಲೆನ್ಸ್ನಲ್ಲೇ ಓಷಧ ಲಭ್ಯವಿದ್ದು, ಕರೆ ಮಾಡಿದರೆ ಮನೆ ಬಾಗಿಲಿಗೆ ಬಂದು ಓಷಧ ನೀಡುತ್ತಾರೆ ಎಂಬ ಗಾಳಿಸುದ್ದಿ ಹರಡಲಾಗುತ್ತಿದೆ. ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಸ್ಪಷ್ಟಪಡಿಸಿದ್ದಾರೆ. ಹಾವಿನ ಕಡಿತಕ್ಕೆ ಆಂಟಿ-ಸ್ನೇಕ್ ವೆನಮ್ ಓಷಧವು ಹತ್ತಿರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ. ಆದ್ದರಿಂದ, ಹಾವಿನ ಕಡಿತಕ್ಕೊಳಗಾದವರು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಉಚಿತವಾಗಿ ಚಿಕಿತ್ಸೆ ಮತ್ತು ಓಷಧವನ್ನು ಪಡೆದುಕೊಳ್ಳಬಹುದು ಎಂದು ಮನವಿ ಮಾಡಿದ್ದಾರೆ.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 