ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಜಾರಕಿಹೊಳಿ ಕುಟುಂಬ ಹೊಣೆಯಲ್ಲ: ಸತೀಶ್ ಜಾರಕಿಹೊಳಿ

  ಬೆಳಗಾವಿ, ಜುಲೈ 26  ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಜಾರಕಿಹೊಳಿ ಕುಟುಂಬ ಕಾರಣವಲ್ಲ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ 

  ಮೈತ್ರಿ ಸರ್ಕಾರ ಪತನದ ಬೆನ್ನಲ್ಲೇ ಅದರ ಜವಾಬ್ದಾರಿ ಹೊರಲು ಯಾರೊಬ್ಬರೂ ಸಿದ್ಧರಾಗಿಲ್ಲ  ಪ್ರತಿಯೊಬ್ಬರೂ ಮತ್ತೊಬ್ಬರತ್ತ ಬೊಟ್ಟು ತೋರಿಸುವ ವಾತಾವರಣ ನಿರ್ಮಾಣವಾಗಿದ್ದು, ಈ ಸಂದರ್ಭದಲ್ಲಿ ತಮ್ಮ ಕುಟುಂಬದ ವಿರುದ್ಧವೂ ಪಕ್ಷದ ಕೆಲ ಮುಖಂಡರು ಮಾಡುತ್ತಿರುವ ಆರೋಪದಿಂದ ಸತೀಶ್ ಜಾರಕಿಹೊಳಿ ಗರಂ ಆಗಿದ್ದಾರೆ 

  ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಬಂಡಾಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೈತ್ರಿ ಸರ್ಕಾರದ ಪತನಕ್ಕೆ ಹಲವು ಕಾರಣಗಳಿದ್ದು, ಅದರಲ್ಲಿ ಇದೂ ಸಹ ಸೇರಿಕೊಂಡಿದೆಯಷ್ಟೆ ಎಂದರು.   

  -:ಬಿಜೆಪಿಗೆ ಸಂಖ್ಯಾಬಲವಿಲ್ಲ:- 

  ಮುಖ್ಯಮಂತ್ರಿ ಗಾದಿ ಅಲಂಕರಿಸಲು ಸಜ್ಜಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಯಾವ ಆಧಾರದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬುದು ತಿಳಿಯುತ್ತಿಲ್ಲ ಎಂದ ಸತೀಶ್ ಜಾರಕಿಹೊಳಿ, ಪ್ರಸ್ತುತ ಇರುವ ರಾಜಕೀಯ ಸನ್ನಿವೇಶದಲ್ಲಿ ಮ್ಯಾಜಿಕ್ ಸಂಖ್ಯೆ 111ರ ಬಲ ಬಿಜೆಪಿಗೆ ಇಲ್ಲ.  ಅನರ್ಹಗೊಂಡಿರುವ ಸದಸ್ಯರನ್ನು ಹೊರತುಪಡಿಸಿ ಸದನದ ಸಂಖ್ಯಾಬಲ 222 ಇದ್ದು, ಬಹುಮತ ಸಾಬೀತು ಪಡಿಸಲು ಬಿಜೆಪಿಗೆ ಸಾಧ್ಯವಾಗುವುದಿಲ್ಲ ಎಂದರು. 

  ಏತನ್ಮಧ್ಯೆ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಹಳ್ಳಿ, ಆರ್ ಶಂಕರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೂವರು ಬಂಡಾಯ ಶಾಸಕರನ್ನು ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದನ್ನು ಸ್ವಾಗತಿಸಿ, ಈ ನಿರ್ಧಾರವನ್ನು ಇನ್ನೂ ಮೊದಲೇ ಕೈಗೊಂಡಿದ್ದರೆ ಸರ್ಕಾರವನ್ನು ಪಾರು ಮಾಡಬಹುದಿತ್ತು, ಪಕ್ಷ ವಿರೋಧಿ ಚಟುವಟಿಕೆಗಳ ಕಾರಣ ಮುಂಬೈನಲ್ಲಿರುವ ಇನ್ನಿತರ ಶಾಸಕರನ್ನೂ ಅನರ್ಹಗೊಳಿಸುವ ಸಾಧ್ಯತೆಯಿದೆ ಎಂದು ತಿಳಿಸಿದರು. 

  ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ಬಹುದಿನಗಳ ಹಿಂದೆಯೇ  'ಆಪರೇಷನ್ ಕಮಲ' ಹೈಕಮಾಂಡ್ ಗಮನಕ್ಕೆ ಬಂದಿತ್ತು.  ಆದಾಗ್ಯೂ ಗಂಭೀರವಾಗಿ ಪರಿಗಣಿಸದ ಕಾರಣ ಸರ್ಕಾರ ಉಳಿಸಲು ಸಾಧ್ಯವಾಗಲಿಲ್ಲ ಎಂದರ