ಇಂದು ಏಳನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ
Farewell ceremony for seventh graders today
ಹನುಮಸಾಗರ 10: ಇಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹನುಮನಾಳದಲ್ಲಿ ಏಳನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕನಕಪ್ಪ ನೀರಾವರಿ ಇವರು ವಹಿಸಿಕೊಂಡಿದ್ದರು. ಉಳಿದಂತೆ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಪ್ರೌಢಶಾಲೆಯ ಉಪಾಧ್ಯಕ್ಷರಾದ ಶ್ರೀ ಗುಂಡಪ್ಪ ಕೊತವಬಾಳ ಹಾಗೂ ಊರಿನ ಗುರು ಹಿರಿಯರು ಮತ್ತು ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು ಈ ಸಂದರ್ಭದಲ್ಲಿ ಶ್ರೀಮತಿ ಗೀತಾ ವೀರಣ್ಣವರ್ ಸ ಶಿ ಇವರಿಗೆ ಶ್ರೀಮತಿ ಸಾವಿತ್ರಿಬಾಯಿ ಪೂಲೆ ಸಂಘದ ವತಿಯಿಂದ ನೀಡಲಾದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಾರಣ ಅವರಿಗೆ ಶಾಲೆಯ ವತಿಯಿಂದ ಎಲ್ಲಾ ಶಿಕ್ಷಕ ಬಳಗದವರು ಸೇರಿಕೊಂಡು ಸನ್ಮಾನಿಸಲಾಯಿತು. ಹನುಮನಾಳ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಶರಣಗೌಡ ಇವರು ಉಪಸ್ಥಿತರಿದ್ದು ಕಾರ್ಯಕ್ರಮ ಕುರಿತು ಮಾತನಾಡಿದರು,ಹಾಗೂ ಶ್ರೀ ಹನುಮಪ್ಪ ಮಾಲಗಿತ್ತಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 