38 ವರ್ಷದ ಸೇವೆಗೆ ಬೀಳ್ಕೊಡುಗೆ

38 ವರ್ಷದ ಸೇವೆಗೆ ಬೀಳ್ಕೊಡುಗೆ  Farewell to 38 years of service


ಹೂವಿನಹಡಗಲಿ 02: ಸಮಾಜ ಕಲ್ಯಾಣ ಇಲಾಖೆಯಲ್ಲಿ 38 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ ಆನಂದ ಡೊಳ್ಳಿನ್ ಅವರಿಗೆ ಪಟ್ಟಣದ ಸೇವಾಲಾಲ್ ಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.  

ಸನ್ಮಾನ ಸ್ವೀಕರಿಸಿ ಮಾತನಾಡಿದ ಆನಂದ ಡೊಳ್ಳಿನ್, ತಮ್ಮ ಸೇವಾ ಅವಧಿಯಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಸಹೋದ್ಯೋಗಿಗಳ ಸಹಕಾರದಿಂದ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಯಿತು ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ನಿವೃತ್ತ ಉಪನಿರ್ದೇಶಕ ದ್ಯಾಮಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ. ಕಾಳೆ, ವಿವಿಧ ಮಠಗಳ ಸ್ವಾಮೀಜಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಗಣ್ಯರು ಉಪಸ್ಥಿತರಿದ್ದರು.