ಇಂದು ರಾಜೇಂದ್ರಬಾಬು ಜ್ಞಾನಮೋಠೆಗೆ ಬೀಳ್ಕೊಡುಗೆ ಸಮಾರಂಭ

ಲೋಕದರ್ಶನ ವರದಿ

ಕೊಪ್ಪಳ 29:  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇಂದು ಸೇವಾನಿವೃತ್ತಿ ಹೊಂದುತ್ತಿರುವ ಹಿರಿಯ ಬೆರಳುಚ್ಚುಗಾರ ರಾಜೇಂದ್ರಬಾಬು ಜ್ಞಾನಮೋಠೆ ಅವರಿಗೆ ಇಂದು ದಿ. 30ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಬೀಳ್ಕೊಡುಗೆ ಸಮಾರಂಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ, ನಿವೃತ್ತ ವಾರ್ತಾಧಿಕಾರಿ ಬಸವರಾಜ್ ಆಕಳವಾಡಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಜುಮ್ಮಣ್ಣನವರ್, ಹಿರಿಯ ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯರಾದ ಅಲ್ಲಮಪ್ರಭು ಬೆಟ್ಟದೂರು, ಸಿ.ವಿ.ಜಡಿಯವರ, ಅಂಕಿ ಸಂಖ್ಯಾ ಇಲಾಖೆಯ ಕೃಷ್ಣಮೂರ್ತಿ, ಸೇರಿದಂತೆ ಜಿಲ್ಲೆಯ ಕಲಾವಿದರು, ಸಾಹಿತಿಗಳು, ಅಭಿಮಾನಿಗಳು ಪಾಲ್ಗೊಳ್ಳುವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.