ವರ್ಗಾವಣೆಗೊಂಡ ಆರೋಗ್ಯ ಸಿಬ್ಬಂದಿಗೆ ಬೀಳ್ಕೊಡುಗೆ, ನೂತನ ವೈದ್ಯಾಧಿಕಾರಿಗೆ ಸ್ವಾಗತ
Farewell to Transferred Health Staff, Welcome to the New Medical Officer
ತಾಳಿಕೋಟೆ, ಜು.12: ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ನರ್ಸಿಂಗ್ ಅಧಿಕಾರಿ ಜ್ಯೋತಿ ಕೋಳೂರಗಿ, ಕಚೇರಿ ಅಧೀಕ್ಷಕಿ ಜಮುನಾ ಅರಸಂಗಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಫಯಾಜ್ ಅತ್ತಾರ್ ಹಾಗೂ ಕೊಣ್ಣೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ. ಶ್ರೀಶೈಲ್ ಹುಕ್ಕೇರಿ ಅವರು ಆಲಮಟ್ಟಿ ಕೆಬಿಜೆಎನ್ಎಲ್ ಆಸ್ಪತ್ರಿಗೆ ವರ್ಗಾವಣೆಗೊಂಡ ಹಿನ್ನೆಲೆ ಶನಿವಾರ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಅವರಿಗೆ ಸನ್ಮಾನಿಸಿ ಬೀಳ್ಕೊಡಲಾಯಿತು.
ಇದೇ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆಸ್ಪತ್ರೆಯಿಂದ ನೂತನ ಹಿರಿಯ ವೈದ್ಯಾಧಿಕಾರಿಯಾಗಿ ಆಗಮಿಸಿದ ಡಾ. ಎ.ಜಿ. ಬಿರಾದಾರ್ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಸಂಘಗಳ ಮಹಾಮಂಡಳಿ ನಿರ್ದೇಶಕ ಆನಂದ ಬಿರಾದಾರ್, ಹಿರಿಯ ವೈದ್ಯಾಧಿಕಾರಿ ಡಾ. ಮಧುಬಾಲಾ ಸಿಂಘಾಲ್, ಡಾ. ಸಾಗರ ಪಾಟೀಲ, ಸಿಬ್ಬಂದಿಗಳಾದ ನಾಗರಾಜ್ ಪಾಟೀಲ, ರಾಮನಗೌಡ ಬಿರಾದಾರ್, ಇಸಾಕ್ ಚೌದ್ರಿ, ಮಹೆಬೂಬ್ ನಡುವಿನಮನಿ, ಆಸಿಫ್ ಕಲಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 