ಮಹಿಳಾ ವಿವಿಯಲ್ಲಿ ಪದವಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಹಾಗೂ ಸಾಧಕರಿಗೆ ಸನ್ಮಾನ
Farewell to female graduate students and felicitation of achievers at Women's University
ಲೋಕದರ್ಶನ ವರದಿ
ವಿಜಯಪುರ, ಮೇ 19: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು 23 ವರ್ಷಗಳ ಹಿಂದೆ ಕೇವಲ ನಾಲ್ಕು ವಿಭಾಗಗಳೊಂದಿಗೆ ಆರಂಭಗೊಂಡಿದ್ದು, ಇಂದು 32 ವಿಭಾಗಗಳನ್ನು ಹೊಂದುವ ಮೂಲಕ ಮಹತ್ವದ ಪ್ರಗತಿಯನ್ನು ಸಾಧಿಸಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಅಧ್ಯಯನ ವಿಭಾಗದಲ್ಲಿ 2025-26ನೇ ಸಾಲಿನ ಪದವಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಹಾಗೂ ಸಾಧಕ ವಿದ್ಯಾರ್ಥಿನಿಯರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯವು ಇಂದು ವಿಶಾಲ ವೃಕ್ಷವಾಗಿ ಬೆಳೆಯಲು ವಿದ್ಯಾರ್ಥಿನಿಯರು ಹಾಗೂ ಅಧ್ಯಾಪಕರ ಶ್ರಮವೇ ಕಾರಣವಾಗಿದೆ ಎಂದರು.
ಸ್ನಾತಕ ವಿಭಾಗದ ವಿದ್ಯಾರ್ಥಿನಿಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದ್ದು, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ದಾಖಲಾತಿ ಹೊಂದಿರುವುದು ಇತಿಹಾಸದ ಮೈಲುಗಲ್ಲಾಗಿದೆ ಎಂದು ಅಭಿಪ್ರಾಯಪಟ್ಟರು.
ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ಸ್ನಾತಕ ವಿಭಾಗವು ನಿರಂತರ ಪ್ರಗತಿ ಸಾಧಿಸುತ್ತಿದ್ದು, ವಿದ್ಯಾರ್ಥಿನಿಯರು ಪದವಿ ಪೂರ್ಣಗೊಂಡ ತಕ್ಷಣ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ಆರಂಭಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಕ್ತಿ ವಿದ್ಯಾರ್ಥಿನಿಯರ ಕೈಯಲ್ಲೇ ಇದೆ ಎಂದರು. ಹಣಕಾಸು ಅಧಿಕಾರಿ ರಾಮಣ್ಣ ಅಥಣಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಗುರಿ ತಲುಪಲು ಪ್ರಯತ್ನಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ನಿಕಾಯದ ಡೀನ್ ಪ್ರೊ.ಸಕ್ಪಾಲ ಹೂವಣ್ಣ, ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಆರ್.ವಿ.ಗಂಗಶೆಟ್ಟಿ, ಕಲಾ ನಿಕಾಯದ ಡೀನ್ ಪ್ರೊ.ರಾಜು ಬಾಗಲಕೋಟ, ವಾಣಿಜ್ಯ ಮತ್ತು ವ್ಯವಹಾರ ನಿಕಾಯದ ಡೀನ್ ಪ್ರೊ.ಅನಿತಾ ನಾಟೇಕರ್ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ.ಜಿ.ಜಿ.ರಜಪೂತ ತಮ್ಮ ನಿಕಾಯಗಳ ಅಧೀನದಲ್ಲಿರುವ ವಿಭಾಗಗಳ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.
ಸಾಧನೆಗೈದ ವಿದ್ಯಾರ್ಥಿನಿಯರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಬಿ.ಸಿ.ಎ ಪದವಿಯಲ್ಲಿ ವಿಶ್ವವಿದ್ಯಾಲಯಕ್ಕೆ 5ನೇ ರಾ್ಯಂಕ್ ಪಡೆದ ಕು.ವೈಶಾಲಿ ವಾಗಮೋರೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಕಾವೇರಿ ಪೋಳ, ನಫೀಸಾ ಝಾರೆ, ಭಾಗ್ಯಶ್ರೀ ಮತ್ತು ಸಮೀಕ್ಷಾ ಭೂಸಾರೆ ಮತ್ತು ದಾನಮ್ಮ ಪೂಜಾರಿ ಹಾಗೂ ರಕ್ಷಿತಾ ತಂಬಾಕೆ ಅವರನ್ನು ಅಭಿನಂದಿಸಲಾಯಿತು.
ಇಂಗ್ಲೆಂಡ್ನಲ್ಲಿ ನಡೆಯುವ ಬ್ರಿಟಿಷ್ ಕೌನ್ಸಿಲ್ ಅಧ್ಯಯನ ವಿನಿಮಯ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಕಲ್ಪನಾ ರಾಠೋಡ, ಐಶ್ವರ್ಯಾ ಪಾಟೀಲ, ಶಾಹೀನ್ ಬಿರಾದಾರ, ಅಕ್ಷತಾ ಕುಲಕರ್ಣಿ ಮತ್ತು ಅಶ್ವಿನಿ ಕಾಳೇಕರ ಅವರನ್ನು ಸನ್ಮಾನಿಸಲಾಯಿತು.
ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆಗೈದ ಕಲ್ಪನಾ, ದಾನೇಶ್ವರಿ ಅಲಾಳೆ, ಐಶ್ವರ್ಯಾ ಬಿರಾದಾರ, ಕೀರ್ತಿ ರಾಮತೀರ್ಥ ಹಾಗೂ ಗ್ರಂಥಾಲಯಕ್ಕೆ ಅತಿ ಹೆಚ್ಚು ಭೇಟಿ ನೀಡಿದ ವಿದ್ಯಾರ್ಥಿನಿಯಾಗಿ ಕು. ರೇಣುಕಾ ಬಮನಳ್ಳಿ ಅವರನ್ನು ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಪ್ರೊ.ಸಕ್ಪಾಲ ಹೂವಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಕಾರ್ಯದರ್ಶಿ ಲಕ್ಷ್ಮೀ ಕರ್ನಾಳ ವಾರ್ಷಿಕ ವರದಿ ವಾಚಿಸಿದರು. ಸ್ಪೂರ್ತಿ ಮತ್ತು ತೇಜಸ್ವಿನಿ ಮಹಿಳಾ ಗೀತೆ ಹಾಡಿದರು. ರುಶ್ದಾಖಾನಮ್ ಹಾಗೂ ವಿದ್ಯಾಶ್ರೀ ಸ್ವಾಗತಿಸಿದರು. ಸಂಗೀತಾ, ಪ್ರೇಮಾ, ಕವಿತಾ ಮತ್ತು ಸೌಮ್ಯಾ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಸ್ಪಂದನಾ ವಂದಿಸಿದರು. ಕಾವ್ಯಾ ಚಿಮ್ಮಲಗಿ ಕಾರ್ಯಕ್ರಮ ನಿರೂಪಿಸಿದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 