ಹೋಮ್ ವರ್ಕ್ ಸಮೇತ ಮಕ್ಕಳಿಗೆ ಬೀಳ್ಕೊಡುಗೆ
Farewell to the children with homework
ಮಹಾಲಿಂಗಪುರ 16: ಸಮೀಪದ ನಂದಗಾಂವ ವಸ್ತಿ (ಗುರವ್ ತೋಟದ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ 5ನೇ ತರಗತಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಬೀಳ್ಕೊಡುವ ಸಮಾರಂಭ ಹಮ್ಮಿಕೊಳ್ಳಲಾಯಿತು. ಫಲಿತಾಂಶ ಘೋಷಣೆೆ, ಪಾಲಕರೊಂದಿಗೆ ಸಮಾಲೋಚನೆ, ಸಮುದಾಯದತ್ತ ಕಾರ್ಯಕ್ರಮ, ರಜೆಯಲ್ಲಿ ಮಕ್ಕಳಿಗೆ ಹೋಂವರ್ಕ್ ಬುಕ್ ವಿತರಿಸುವ, ಶಾಲಾ ದಾಖಲಾತಿ ಆರಂಭಿಸುವ ಹಾಗೂ ರಜೆಯಲ್ಲೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ತರಗತಿ ಹಮ್ಮಿಕೊಳ್ಳುವ ಪ್ರಕ್ರಿಯೆ ನಡೆಸಲಾಯಿತು. ಉಪನ್ಯಾಸಕ ಶಿವಲಿಂಗ ಸಿದ್ನಾಳ ಅಭ್ಯಾಸ ಪರಿಕರಗಳನ್ನು ವಿತರಿಸಿದರು. ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಗೊಂದಿ, ಸ್ಕೌಟ್ಸ್ ಕ್ಯಾಪ್ಟನ್ ಎಸ್.ಜಿ.ಜುಟನಟ್ಟಿ, ಶಿಕ್ಷಕ ಸೋಮು ಕಂಬಳಿ, ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು, ಪಾಲಕರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 