ಕೃಷಿ ಸಾಲ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ರೈತ ಸಾವು
Farm loan: Farmer commits suicide
ರಾಣಿಬೆನ್ನೂರು 25: ವಿಷ ಸೇವಿಸಿದ್ದ ರೈತರೊಬ್ಬರು ಚಿಕಿತ್ಸೆ ಫಲಿಸದೇ ಸಾವೀಗೀಡಾದ ಘಟನೆ ಬುಧವಾರ ತಾಲೂಕಿನ ಮಾಗೋಡ ಗ್ರಾಮದಲ್ಲಿ ನಡೆದಿದೆ.ಕರಬಸಪ್ಪ ಉಜ್ಜಪ್ಪ ಕಮದೋಡ(31) ಮೃತ ರೈತ. ಇವರು ತಮ್ಮ ತಂದೆಯ ಹೆಸರಿನಲ್ಲಿ ಗ್ರಾಮದ ವಿವಿಧೆಡೆ ಸುಮಾರು 12 ಎಕರೆ ಜಮೀನುಗಳಲ್ಲಿ ಕೃಷಿ ಕೈಗೊಂಡಿದ್ದರು. ಕೃಷಿಗಾಗಿ ರಾಣಿಬೆನ್ನೂರಿನ ಎಸ್ಬಿಐನಲ್ಲಿ 3 ಲಕ್ಷ ಸಾಲ ಮಾಡಿದ್ದರು.
ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರಕೃತಿ ವಿಕೋಪದಿಂದ ಕೃಷಿಯಲ್ಲಿ ಹಾನಿ ಸಂಭವಿಸುತ್ತಾ ಬಂದ ಕಾರಣ ಆ. 15ರಂದು ಮನನೊಂದು ರೇಷ್ಮೆ ಮನೆಯಲ್ಲಿ ವಿಷ ಸೇವಿಸಿದ್ದರು. ಅವರನ್ನು ತಕ್ಷಣವೇ ರಾಣಿಬೆನ್ನೂರಿನ ಸರ್ಕಾರಿ ಆಸ್ಪತ್ರೆ, ದಾವಣಗೆರೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವೀಗೀಡಾಗಿದ್ದಾರೆ ಎಂದು ಮೃತರ ಪತ್ನಿ ಕವಿತಾ ಹಲಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 