ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ಜಾರಿಗೆ
Farmer's Safety Crop Insurance Scheme implemented
ಹಾವೇರಿ 12 : ರಾಜ್ಯದಲ್ಲಿ 2025-26 ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲಾ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26 ನೇ ಸಾಲಿನಲ್ಲಿ 14 ಬೆಳೆಗಳಾದ ಜೋಳ (ನೀರಾವರಿ), ಜೋಳ (ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ), ಗೋಧಿ (ಮಳೆ ಆಶ್ರಿತ), ಕಡಲೆ (ಮಳೆ ಆಶ್ರಿತ), ಕಡಲೆ (ನೀರಾವರಿ), ಉದ್ದು (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ), ಹೆಸರು (ಮಳೆ ಆಶ್ರಿತ), ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ), ಕುಸುಬೆ (ಮಳೆ ಆಶ್ರಿತ), ಈರುಳ್ಳಿ (ನೀರಾವರಿ) ಮತ್ತು ಟೊಮ್ಯಾಟೊ-ಓಖ ಇವುಗಳನ್ನು ಹಿಂಗಾರು ಹಂಗಾಮಿಗೆ ಮತ್ತು 3 ಬೆಳೆಗಳಾದ ಭತ್ತ (ನೀರಾವರಿ), ನೆಲಗಡಲೆ (ಶೇಂಗಾ) (ನೀರಾವರಿ) ಮತ್ತು ಸೂರ್ಯಕಾಂತಿ (ನೀರಾವರಿ) ಇವುಗಳನ್ನು ಬೇಸಿಗೆ ಹಂಗಾಮಿಗೆ ಅಧಿಸೂಚಿಸಲು ಹಾಗೂ ಇವುಗಳಲ್ಲಿ ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ (ಗ್ರಾಮ ಪಂಚಾಯತಿ ವ್ಯಾಪ್ತಿಯಿಂದ ಹೊರಗಿರುವ ಮತ್ತು ಪಟ್ಟಣ/ನಗರ ವ್ಯಾಪ್ತಿಗೆ ಸೇರುವ ಗ್ರಾಮಗಳನ್ನು ಸೇರಿಸಿದಂತೆ) ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಳವಡಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಬ್ಯಾಂಕುಗಳು, ಸಾಮಾನ್ಯ ಸೇವಾ ಕೇಂದ್ರ (ಅಠಟಠ ಖಜಡಿತಛಿಜ ಅಜಟಿಣಜಢಿ), ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 