ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿಯನ್ನು ನಂದಿಸಲು ಹೋಗಿ ರೈತ ಸಜೀವ ದಹನ
Farmer burnt alive while trying to put out fire in sugarcane field
ಕೊಲ್ಹಾರ 01: ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿಯನ್ನು ನಂದಿಸಲು ಹೋಗಿದ್ದ ರೈತನೊಬ್ಬ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಪಟ್ಟಣದ ಸಮೀಪದ ಮಹಾದೇವಪ್ಪನ ತೆವೆರ ಬಳಿ ನಡೆದಿದೆ.
ಮೃತರನ್ನು ಸಂಗಪ್ಪ ಈರ್ಪ ಕುಂಬಾರ (80) ಎಂದು ಗುರುತಿಸಲಾಗಿದೆ. ತಮ್ಮ ಸ್ವಂತ ಜಮೀನಿನಲ್ಲಿದ್ದ ಗೋಧಿ ಹುಲ್ಲು ಸುಡಲು ಬೆಂಕಿ ಹಚ್ಚಿದ ವೇಳೆ, ಆ ಬೆಂಕಿ ಪಕ್ಕದ ಜಮೀನಿನ ಕಬ್ಬಿನ ಗದ್ದೆಗೆ ಹಬ್ಬಿದೆ. ಅದನ್ನು ನಂದಿಸಲು ತೆರಳಿದ ಸಂಗಪ್ಪ ಅವರು ಅಕಸ್ಮಿಕವಾಗಿ ಬೆಂಕಿಗೆ ಸಿಲುಕಿದ್ದು, ಮಧ್ಯಾಹ್ನ ಸಮಯದಲ್ಲಿ ಸಜೀವ ದಹನಗೊಂಡಿದ್ದಾರೆ.
ಘಟನೆ ನಡೆದ ವೇಳೆ ಸುತ್ತಮುತ್ತ ಯಾರೂ ಇರಲಿಲ್ಲ. ಸಂಜೆ ವೇಳೆಗೆ ಮನೆಗೆ ಮರಳದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಕೊಲ್ಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 