ಬೆಳೆ ಹಾನಿಯಿಂದ ಬೇಸತ್ತು ರೈತನ ಆತ್ಮಹತ್ಯೆ; ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡರು ಹಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ!

ಬೆಳೆ ಹಾನಿಯಿಂದ ಬೇಸತ್ತು ರೈತನ ಆತ್ಮಹತ್ಯೆ; ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಜೆಪಿ ಮುಖಂಡರು ಹಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ!  Farmer commits suicide due to crop damage; BJP leaders offer condolences to family, but express ange

ಲೋಕದರ್ಶನ ವರದಿ 

 ಮುಂಡಗೋಡ 12 : ತಾಲೂಕಿನ ಕಾವಲಕೊಪ್ಪ ಗ್ರಾಮದಲ್ಲಿ ಬೆಳೆ ಹಾನಿಯಿಂದ ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ನರಸಿಂಗ ಪೀರ​‍್ಪ ಕಿವುಡನವರ ಎಂಬ ರೈತ ಬೆಳೆ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.   

 ಘಟನೆಯ ಹಿನ್ನೆಲೆ ಗುರುವಾರ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮೃತ ರೈತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ರಾಜ್ಯದಲ್ಲಿ ರೈತರ ಸಮಸ್ಯೆಗಳ ಕಡೆ ಸರ್ಕಾರ ಸಮರ​‍್ಕವಾಗಿ ಗಮನ ಹರಿಸದ ಕಾರಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ಆತ್ಮಹತ್ಯೆಗಳ ಪ್ರಮಾಣ ಹೆಚ್ಚುತ್ತಿದೆ ಎಂದು ಅವರು ಆರೋಪಿಸಿದರು. ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಕನಿಷ್ಠ ?25 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಕೃಷಿ ಸಚಿವರು ಮುಂಡಗೋಡಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.   

 ಈ ವೇಳೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶೋಕ್ ಚಲವಾದಿ ಮಾತನಾಡಿ, ಹೆಚ್ಚುತ್ತಿರುವ ಕೃಷಿ ವೆಚ್ಚ, ಸಾಲದ ಬಾಧೆ ಹಾಗೂ ಬೆಳೆಗಳಿಗೆ ಸಮರ​‍್ಕ ಬೆಲೆ ಸಿಗದ ಕಾರಣ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರ ಕನಿಷ್ಠ ?25 ಲಕ್ಷ ಪರಿಹಾರ ನೀಡಬೇಕು ಹಾಗೂ ಮೃತ ರೈತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು. ಜೊತೆಗೆ ಮೃತ ರೈತನ ಮಕ್ಕಳ ಶಿಕ್ಷಣದ ಹೊಣೆಗಾರಿಕೆಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಹೇಳಿದರು.   

 ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ್ ಪಾಟೀಲ್ ಮಾತನಾಡಿ, ಮಳೆಯಿಂದ ಬೆಳೆ ನಷ್ಟವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಮತ್ತು ಶಾಸಕರು ರೈತರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ತೋರಿಸುತ್ತಿಲ್ಲ ಎಂದು ಆರೋಪಿಸಿದರು. ತಾಲೂಕಿನಲ್ಲೇ ರೈತ ಆತ್ಮಹತ್ಯೆ ಸಂಭವಿಸಿದ್ದರೂ ಶಾಸಕರು ಮೃತ ರೈತನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳದಿರುವುದು ದುಃಖಕರ ಎಂದು ಹೇಳಿದರು.

ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.   ರೈತ ಆತ್ಮಹತ್ಯೆ ಮಾಡಿಕೊಂಡು ನಾಲ್ಕು ದಿನ ಕಳೆದರೂ ತಹಶೀಲ್ದಾರ್ ಸೇರಿದಂತೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ಇರುವುದನ್ನು ಖಂಡಿಸಿದ ಅವರು, ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ದೊರಕುವಂತೆ ಮಾಡಬೇಕು ಎಂದು ಆಗ್ರಹಿಸಿದರು.   ಮೃತ ರೈತನ ಕುಟುಂಬಕ್ಕೆ ಸಹಾಯವಾಗುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ?10,000 ಸಂಗ್ರಹಿಸಿ ಕುಟುಂಬಕ್ಕೆ ನೆರವು ನೀಡಿದರು.    

ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಬಿಜೆಪಿ ಮುಖಂಡ ಎಲ್‌.ಟಿ. ಪಾಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶೋಕ್ ಚಲವಾದಿ, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಮಂಜುನಾಥ್ ಪಾಟೀಲ್, ಚಿಗಳ್ಳಿ ಸೊಸೈಟಿ ಅಧ್ಯಕ್ಷ ಮೋಹನ್ ಕಲಾಲ್, ಉಪಾಧ್ಯಕ್ಷ ಫಕ್ಕೀರಸ್ವಾಮಿ ಬಂಕಾಪುರ, ಮಂಜುನಾಥ್ ಹೋತನಳ್ಳಿ, ಫಕ್ಕೀರಸ್ವಾಮಿ ಹುಲಿಯವನವರ, ವಕೀಲ ಶಿವಪುತ್ರ ಮಳವಳ್ಳಿ, ಕೋಟೆಶ ಗಣಪ್ಪನವರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.