ಲಾಕ್‌ಡೌನ್: ಹಣ್ಣು ಮಾರಾಟ ಮಾಡಲಾಗದೇ ರೈತ ಆತ್ಮಹತ್ಯೆ

ಕಲಬುರಗಿ, ಮಾ.31,ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ  ಹಣ್ಣು ಸರಬರಾಜು ಮಾಡಲಾಗದೇ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಜಿಲ್ಲೆ ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದ ರೈತ ಕಲ್ಲಂಗಡಿ ಹಣ್ಣು ಸರಬರಾಜು ಮಾಡಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.45 ವರ್ಷದ ಚಂದ್ರಕಾಂತ ಬಿರಾದಾರ ಎಂಬುವವರು ಸೋಮವಾರ ರಾತ್ರಿ ತಮ್ಮ ಜಮೀನಿನಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಮೃತ  ಚಂದ್ರಕಾಂತ ಅವರು ತಮ್ಮ 3 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದರು.  ಆದರೆ, ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಬೆಳೆದ ಹಣ್ಣುಗಳನ್ನು ಸಾಗಾಟ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ  ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿದಂತೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.