ಸಿಎಂ ಸಿದ್ದರಾಮಯ್ಯ ಅವರಿಗೆ ರೈತ ಮುಖಂಡ ಕೊಣ್ಣೂರ ಅಭಿನಂದನೆ
Farmer leader Konnoor congratulates CM Siddaramaiah
ಲೋಕದರ್ಶನ ವರದಿ
ಮಹಾಲಿಂಗಪುರ, ಸೆ.18: ಎರಡನೇ ಹಂತದ ಬರಪೀಡಿತ ಪ್ರದೇಶಗಳ ಘೋಷಣಾ ಪಟ್ಟಿಯಲ್ಲಿ ತೇರದಾಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳನ್ನು ಸೇರೆ್ಡಗೊಳಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ರೈತರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಗುರುವಾರ ಪತ್ರಿಕೆಗೆ ವಿಷಯ ತಿಳಿಸಿ ಮಾತನಾಡಿದ ಅವರು, ತಾವು ಕೂಡ ರೈತನ ಮಗನಾಗಿದ್ದು, ರೈತರ ಕಷ್ಟ-ನಷ್ಟಗಳನ್ನು ಅರಿತಿದ್ದೇನೆ. ಪ್ರಸಕ್ತ ವರ್ಷ ಮಳೆ ಕೊರತೆಯಿಂದಾಗಿ 1976ರ ದಾಖಲೆಯನ್ನೂ ಮೀರಿಸುವ ರೀತಿಯಲ್ಲಿ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಈ ಭಾಗದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ಆಗಸ್ಟ್ 27ರಂದು ರಾಜ್ಯ ಸರ್ಕಾರ ಪ್ರಕಟಿಸಿದ್ದ ಮೊದಲ ಹಂತದ 101 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ತೇರದಾಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳು ಸೇರೆ್ಡಯಾಗಿರಲಿಲ್ಲ. ಈ ಕುರಿತು ಮುಖ್ಯಮಂತ್ರಿಯವರ ಗಮನಕ್ಕೆ ಮನವಿ ಸಲ್ಲಿಸಿದಾಗ ಅವರು ತಕ್ಷಣ ಸ್ಪಂದಿಸಿ ರೈತರ ನೆರವಿಗೆ ಬಂದಿದ್ದಾರೆ ಎಂದು ಹೇಳಿದರು.
ನೈಸರ್ಗಿಕ ವಿಕೋಪ ಉಸ್ತುವಾರಿ ಅಧ್ಯಯನದ ಆಧಾರದ ಮೇಲೆ ಸರ್ಕಾರಕ್ಕೆ ಸಲ್ಲಿಸಲಾದ ವರದಿಯಂತೆ ಸೆ.17ರಂದು ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪಟ್ಟಿಯಲ್ಲಿ ತೇರದಾಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳನ್ನೂ ಸೇರೆ್ಡ ಮಾಡಿರುವುದು ಸ್ವಾಗತಾರ್ಹ ಎಂದರು.
ಬರಪೀಡಿತ ತಾಲೂಕುಗಳ ರೈತರಿಗೆ ಬೆಳೆ ವಿಮೆ ಸೇರಿದಂತೆ ಅಗತ್ಯ ಪರಿಹಾರ ಹಾಗೂ ನೆರವು ದೊರೆಯುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶೀಘ್ರ ಮನವಿ ಸಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು. ರೈತರ ಪರವಾಗಿ ಸರ್ಕಾರ ತಕ್ಷಣ ಸ್ಪಂದಿಸಿರುವುದು ಸಂತಸ ತಂದಿದೆ ಎಂದು ಸಿದ್ದು ಕೊಣ್ಣೂರ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 