ಬೆಳೆ ನಷ್ಟ, ವಿಮೆ ಪರಿಹಾರ ಬಿಡುಗಡೆಗೆ ರೈತ ಸಂಘದ ಜಿಲ್ಲಾಧ್ಯಕ್ಷ ಸಗರ ಆಗ್ರಹ.
Farmers' Association district president Sagar demands release of insurance compensation for crop los
ಬೆಳೆ ನಷ್ಟ, ವಿಮೆ ಪರಿಹಾರ ಬಿಡುಗಡೆಗೆ ರೈತ ಸಂಘದ ಜಿಲ್ಲಾಧ್ಯಕ್ಷ ಸಗರ ಆಗ್ರಹ.
ದೇವರಹಿಪ್ಪರಗಿ 06: ಅತಿವೃಷ್ಟಿ ಮಳೆಯಿಂದ ಎಲ್ಲ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರ,ಬೆಳೆ ವಿಮೆ ಹಣ ಬಿಡುಗಡೆ ಗೊಳಿಸಬೇಕು, ಪ್ರತಿ ಹೆಕ್ಟರ್ ಗೆ 50ಸಾವಿರ ಬೆಳೆ ಪರಿಹಾರ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ ಕೆಲ ವರ್ಷದಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಮತ್ತು ಪ್ರಸ್ತುತ ವರ್ಷದಲ್ಲಿ ಅತಿಯಾದ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಬೆಳೆದ ಎಲ್ಲಾ ಬೆಳೆಗಳು ಸಂಪೂರ್ಣವಾಗಿ ಹಾನಿಯಾಗಿವೆ. ರೈತರು ಸಾಲ ಮಾಡಿ ಬೆಳೆದ ಬೆಳೆ ಇನ್ನೇನು ರಾಶಿ ಮಾಡಬೇಕೆಂಬ ಪರಿಸ್ಥಿತಿಯಲ್ಲಿ ಅತಿಯಾದ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಪಡೆದ ಸಾಲವನ್ನು ಸಂಪೂರ್ಣ ಸರ್ಕಾರ ಮನ್ನಾ ಮಾಡಬೇಕು, ಪ್ರತಿ ಹೆಕ್ಟೇರಿಗೆ 50ಸಾವಿರ ಬೆಳೆ ಪರಿಹಾರ ಒದಗಿಸಬೇಕು ಹಾಗೂ ರೈತರು ಕಟ್ಟಿದ ಬೆಳೆ ವಿಮೆ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.ಇದೇ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷರಾದ ಈರ್ಪ ಕುಳೇಕುಮಟಗಿ, ಗೌರವಾಧ್ಯಕ್ಷರಾದ ಶಿವಾನಂದ ಹಿರೇಮಠ, ಮಹಿಳಾ ಘಟಕದ ಸುನಂದಾ ಸೊನ್ನಳ್ಳಿ, ಪ್ರಭಾವತಿ ಬಸರಕೋಡ, ಅಂಬವ್ವ ಬಿರಾದಾರ, ನಿಂಗಣ್ಣ ಬೋರಾವತ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ರೈತ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 