ಬೆಳೆ ವಿಮೆ ನೋಂದಣಿ ಗೊಂದಲ ನಿವಾರಣೆಗೆ ರೈತ ಸಂಘ ಮನವಿ
Farmers' association appeals for resolution of crop insurance registration confusion
ಬ್ಯಾಡಗಿ 13: ಬೆಳೆ ವಿಮೆ ನೋಂದಣಿಯಲ್ಲಿ ಉಂಟಾಗಿರುವ ಗೊಂದಲವನ್ನು ತಕ್ಷಣ ನಿವಾರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲೆಯ ಹಿರಿಯ ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮೊಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೃಷಿ ಇಲಾಖೆ ಕಚೇರಿಯಲ್ಲಿ ಕೃಷಿ ನಿರ್ದೇಶಕರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ಬೆಳೆ ವಿಮೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವಂತೆ ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಬೆಳೆ ಸಾಲ ಪಡೆದ ರೈತರು ಗ್ರಾಮ ಒನ್ ಕೇಂದ್ರಗಳಲ್ಲಿ ದೃಢೀಕರಣ ಪತ್ರದೊಂದಿಗೆ ಬೆಳೆ ವಿಮೆ ನೋಂದಾಯಿಸಬೇಕು. ಬ್ಯಾಂಕ್ಗಳಿಂದ ಸಾಲ ಪಡೆದ ರೈತರು ಬೆಳೆ ಬದಲಾವಣೆ ಪತ್ರ ಸಲ್ಲಿಸಿ, ಬ್ಯಾಂಕ್ಗಳ ಮೂಲಕವೇ ವಿಮೆ ಮಾಡಿಸಬೇಕಿದೆ. ಆದರೆ ’ಕಟ್ ಬಾಕಿ’ ಹಾಗೂ ಎನ್ಪಿಎ (ಓಕಂ) ಹೊಂದಿರುವ ರೈತರು ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕೆಂಬ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಇದನ್ನು ಕೂಡಲೇ ನಿವಾರಿಸಬೇಕು ಎಂದು ಆಗ್ರಹಿಸಿದರು.
ರೈತ ಮರಿಗೌಡ ಪಾಟೀಲ ಮಾತನಾಡಿ, ಈ ವರ್ಷ ಎಲ್ನಿನೋ ಪರಿಣಾಮದಿಂದ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮೊದಲ ಬಿತ್ತನೆ ಹಾನಿಯಾಗಿದ್ದರಿಂದ ಅನೇಕ ರೈತರು ಮರು ಬಿತ್ತನೆ ಮಾಡಿದ್ದಾರೆ. ಈಗಲೂ ಸಮರ್ಕ ಮಳೆಯಿಲ್ಲದ ಕಾರಣ ಬೆಳೆ ಕೈಗೆ ಸೇರುವ ಬಗ್ಗೆ ಆತಂಕ ಎದುರಾಗಿದೆ ಎಂದು ಹೇಳಿದರು.
ರೈತ ಶಿವಯೋಗಿ ಹೊಸಗೌಡ್ರ ಮಾತನಾಡಿ, ಕಳೆದ ಮೂರು-ನಾಲ್ಕು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯಲ್ಲೇ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಇಂತಹ ಸಂದರ್ಭದಲ್ಲಿ ರೈತರ ರಕ್ಷಣೆಗೆ ಜಾರಿಯಲ್ಲಿರುವ ಬೆಳೆ ವಿಮೆ ಯೋಜನೆಯಲ್ಲಿ ಹೊಸ ಷರತ್ತುಗಳನ್ನು ವಿಧಿಸುವುದು ಸರಿಯಲ್ಲ. ಸ್ವಯಂ ಘೋಷಣಾ ಪತ್ರ ಕಡ್ಡಾಯಗೊಳಿಸಿರುವ ಆದೇಶವನ್ನು ಹಿಂಪಡೆದು, ಹಿಂದಿನ ಪದ್ಧತಿಯಂತೆ ಬೆಳೆ ವಿಮೆ ನೋಂದಣಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಕೃಷಿ ನಿರ್ದೇಶಕ ಡಾ. ಸತೀಶ್ ಮಾತನಾಡಿ, ಈ ವಿಷಯ ಈಗಾಗಲೇ ಇಲಾಖೆಯ ಗಮನಕ್ಕೆ ಬಂದಿದೆ. ಹಾವೇರಿ ಜಿಲ್ಲಾ ರೈತ ಸಂಘ ಹಾಗೂ ಜನಪ್ರತಿನಿಧಿಗಳ ಮನವಿಯ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮತ್ತೊಮ್ಮೆ ಕೇಂದ್ರ ಸರ್ಕಾರದ ಗಮನಕ್ಕೆ ವಿಷಯವನ್ನು ತರಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬಳ್ಳಾರಿ, ಮರಿಗೌಡ ಪಾಟೀಲ, ಶಿವಯೋಗಿ ಹೊಸಗೌಡ್ರ, ಗುಡ್ಡನಗೌಡ ಪಾಟೀಗೌಡ್ರ, ರುದ್ರ್ಪ ಅಣ್ಣಿ, ಸುಭಾಷ್ ಬನ್ನಿಹಟ್ಟಿ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 