ರಸ್ತೆ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಲು ರೈತ ಸಂಘ ಆಗ್ರಹ
Farmers' association demands special package for road development
ಹೂವಿನಹಡಗಲಿ 14: ತಾಲ್ಲೂಕಿನ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರ ಸಂಪರ್ಕಿಸುವ ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾಗಿದ್ದು, ಸರ್ಕಾರ ತಕ್ಷಣ ದುರಸ್ತಿಪಡಿಸಬೇಕು ಎಂದು ಕರ್ನಾಟಕ ರೈತ ಸಂಘ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಮುಖಂಡರು ಒತ್ತಾಯಿಸಿದರು.ಸಂಘಟನೆಗಳ ಪದಾಧಿಕಾರಿಗಳು ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ನಿಂತು ಬುಧವಾರ ಪ್ರತಿಭಟಿಸಿದರು.
ಅಂತರ್ ಜಿಲ್ಲೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ತುಂಬೆಲ್ಲ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಜೀವ ಕೈಯಲ್ಲಿಡಿದು ಸಾಗುವಂತಾಗಿದೆ. ರಾಜ್ಯ ಸರ್ಕಾರ ಈ ರಸ್ತೆ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಿ, ರಾಷ್ಟ್ರೀಯ ಹೆದ್ದಾರಿ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹೊಸಮನಿ ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಶಿವರಾಜ್, ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ಚಂದ್ರಶೇಖರ ದೊಡ್ಡಮನಿ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಬೆನ್ನೂರು ಹಾಲೇಶ್ ಇತರರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 