ವಿಜಯಪುರವನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಘೋಷಿಸಲು ರೈತ ಸಂಘ ಆಗ್ರಹ

  ವಿಜಯಪುರವನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಘೋಷಿಸಲು ರೈತ ಸಂಘ ಆಗ್ರಹ Farmers' association demands that Vijayapura be declared a fully drought-hit district

ಲೋಕದರ್ಶನ ವರದಿ 

ವಿಜಯಪುರ  28 : ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರೈತ ಸಂಘ ಆಗ್ರಹಿಸಿದೆ. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ 13 ತಾಲೂಕುಗಳ ಪೈಕಿ ಕೇವಲ 3 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿದ ಸಂಘ, ಉಳಿದ ತಾಲೂಕುಗಳಿಗೂ ಬರಪರಿಹಾರ ಹಾಗೂ ಕೃಷಿ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿತು.