ಕಬ್ಬಿಗೆ ನಿಗದಿತ ದರ ಮಾಡಬೇಕೆಂದು ರೈತರ ಆಹೋರಾತ್ರಿ ಧರಣಿ ಸತ್ಯಾಗ್ರಹ
Farmers' day-night sit-in demanding fixed price for sugarcane
ಯರಗಟ್ಟಿ, 05 : ಪ್ರತಿ ಟನ್ ಕಬ್ಬಿಗೆ ?3500 ದರ ನಿಗದಿ ಮಾಡಬೇಕೆಂದು ಒತ್ತಾಯಿಸಿ, ನಾನಾ ರೈತ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಬ್ಬು ಬೆಳೆಗಾರರು ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತಿದಲ್ಲಿ 4ನೇ ದಿನದ ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.ಧರಣಿಯಲ್ಲಿ ರೈತರು ಭಜನೆ, ಡೊಳ್ಳು ನಾದ, ಪದಗೀತೆಗಳ ಮೂಲಕ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲೇ ಅಡುಗೆ ಮಾಡಿ ಊಟ ಮಾಡುವ ಮೂಲಕ ತಮ್ಮ ಹೋರಾಟವನ್ನು ಮುಂದುವರಿಸಿದರು. ಈ ವೇಳೆ ಅನೇಕ ಶ್ರೀಗಳು, ಮುಖಂಡರು ಅವರು ಅಕ್ಕಿ ಪಾಕೆಟುಗಳು ಸೇರಿದಂತೆ ನಾನಾ ಕಿರಾಣಿ ವಸ್ತುಗಳನ್ನು ದೇಣಿಗೆಯಾಗಿ ನೀಡಿದರು.ನೇಗಿಲ ಯೋಗಿ ರೈತ ಸಂಘದ ಹೋರಾಟಕ್ಕೆ ಬೇಕಾದ ಸಕಲ ವ್ಯವಸ್ಥೆ ಕಲ್ಪಿಸಿದರು.ಬಿಜೆಪಿ ಮುಖಂಡ ಮಡಿವಾಳಪ್ಪ ಬಿದರಗಡ್ಡಿ ಮಾತನಾಡಿ, “ಪ್ರತಿ ಟನ್ ಕಬ್ಬಿಗೆ ?3500 ದರ ನಿಗದಿ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ರೈತರ ಹೋರಾಟಕ್ಕೆ ನಾನು ಸದಾ ಬೆಂಬಲಿಯಾಗಿರುತ್ತೇನೆ,” ಎಂದು ಹೇಳಿದರು.
ಸಕ್ಕರೆ ಕಾರ್ಖಾನೆಗಳು ನಷ್ಟದಲ್ಲಿದ್ದೇವೆ ಎಂದು ಹೇಳಿಕೊಳ್ಳುತ್ತಿವೆ. ಹಾಗಾದರೆ ಮತ್ತೆ ಹೊಸ ಕಾರ್ಖಾನೆಗಳನ್ನು ಏಕೆ ಆರಂಭಿಸುತ್ತಿದ್ದಾರೆ? ಇದು ರೈತರನ್ನು ದಿಕ್ಕುತಪ್ಪಿಸುವ ರಾಜಕೀಯ ಆಟ,” ಎಂದು ಆಕ್ರೋಶ ವ್ಯಕ್ತಪಡಿಸಿದರು ಮತ್ತು ರೈತರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಕರೆ ನೀಡಿದರು.ಕಾಂಗ್ರೆಸ್ ಮುಖಂಡ ಉಮೇಶ ಬಾಳಿ ಮಾತನಾಡಿ, “ಪ್ರತಿ ಟನ್ ಕಬ್ಬಿಗೆ ?3500 ದರ ಘೋಷಣೆ ಮಾಡುವವರೆಗೆ ಹೋರಾಟ ನಿಲ್ಲದು,” ಎಂದು ಹೇಳಿದರು.
ಜಿಲ್ಲೆಯಲ್ಲಿ 28 ಸಕ್ಕರೆ ಕಾರ್ಖಾನೆಗಳಿದ್ದರೂ ಯಾವುದೇ ಕಾರ್ಖಾನೆ ರೈತರ ಬೇಡಿಕೆಯಂತೆ ದರ ಘೋಷಣೆ ಮಾಡಿಲ್ಲವೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಧರಣಿಯಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು. ನೇಗಿಲ ಯೋಗಿ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ರೈತ ಮಹಾಸಂಘ, ಸ್ವಾಭಿಮಾನ ರೈತ ಸಂಘ, ಕರ್ನಾಟಕ ರಾಷ್ಟ್ರೀಯ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳು ಧರಣಿಗೆ ಬೆಂಬಲ ನೀಡಿದವು.
ಗಣ್ಯರಿಂದ ಬೆಂಬಲ:ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಪಂಚನಗೌಡ ದ್ಯಾಮನಗೌಡರ, ಉದಯ ಕರ್ಜಗಿಮಠ, ರೈತ ಸಂಘದ ಮುಖಂಡರಾದ ಮಹಾಂತೇಶ ತೋಟಗಿ, ಯಲ್ಲನಾಯ್ಕ ನಾಯ್ಕರ, ಮಾರುತಿ ಹಾಲ್ಲೋಳ್ಳಿ, ಬಿ. ಜಿ. ಕುಂಬಾರ, ಬಸವರಾಜ ಬಿಜ್ಜೂರ, ಈರ್ಪ ಪಗಡಿ, ರಮೇಶ ಪಾಲಬಾಂವಿ, ಮಹಾದೇವ ಕಲಾರಕೋಪ್ಪ, ಸುರೇಶ ಬಂಟನೂರ, ಅಶೋಕ ನಂದಿ, ಗೌಡಪ್ಪ ಸವದತ್ತಿ, ಚಂದ್ರ್ಪ ಹೊಸಮನಿ, ಸಿದ್ದಪ್ಪ ಅಡಕಲಗುಂಡಿ, ಶಿವಕುಮಾರ ಗಾಣಗಿ, ಶಂಕರ ತಡಸಿ, ಸೋಮು ರೈನಾಪೂರ, ರಾಮಕೃಷ್ಣ ಎಳ್ಳಮ್ಮಿ, ರಂಗಪ್ಪ ಗಂಗರಡ್ಡಿ, ಮುತ್ತು ವೀರಾಪೂರ ಅನೇಕ ಗಣ್ಯರು ಹಾಗೂ ಜನಪ್ರತಿನಿಧಿಗಳು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 