ನೀರಿನ ಅಭಾವದಿಂದ ರೈತರ ಸಂಕಷ್ಟ: ಕಾಲುವೆಗಳಿಗೆ ನೀರು ಬಿಡುವಂತೆ ಮನವಿ
Farmers' distress due to water scarcity: Appeal to release water into canals
ಕೊಲ್ಹಾರ 15 : ತಾಲ್ಲೂಕಿನ ರೈತರ ಜಮೀನುಗಳಿಗೆ ನೀರಾವರಿ ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಎಲ್ಲಾ ಕಾಲುವೆಗಳಿಗೆ ಶೀಘ್ರವಾಗಿ ನೀರು ಹರಿಸಬೇಕು ಎಂದು ತಹಶೀಲ್ದಾರ ಸಂತೋಷ ಮ್ಯಾಗೇರಿ ಅವರ ಮುಖಾಂತರ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರವಿ ಗೊಳಸಂಗಿ ನೇತೃತ್ವದಲ್ಲಿ ಅವರ ಕಾರ್ಯಕರ್ತರು ರೈತರು ಬುಧವಾರ ಮನವಿಯನ್ನು ಸಲ್ಲಿಸಿದರು ಪ್ರಸಕ್ತ ಮುಂಗಾರು ಮಳೆ ಕೊರತೆಯಿಂದ ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳೆಗಳು ನೀರಿನ ಅಭಾವದಿಂದ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನ-ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.
ಪ್ರಸ್ತುತ ಆಲಮಟ್ಟಿ ಜಲಾಶಯದಲ್ಲಿ ಸುಮಾರು 95 ಟಿಎಂಸಿ ನೀರು ಸಂಗ್ರಹವಿದ್ದು, ರೈತರ ಹಿತದೃಷ್ಟಿಯಿಂದ ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಎಲ್ಲಾ ಕಾಲುವೆಗಳಿಗೆ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಹಾಗೂ ಜಾನುವಾರುಗಳ ಮೇವಿನ ವ್ಯವಸ್ಥೆಯನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.ಸಮರ್ಕ ನೀರು ಹರಿಸಿದರೆ ರೈತರಿಗೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಒಂದು ವೇಳೆ ಶೀಘ್ರವಾಗಿ ನೀರು ಹರಿಸದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ನೇತೃತ್ವದಲ್ಲಿ ರೈತರೊಂದಿಗೆ ಸೇರಿ ಕೊಲ್ಹಾರ ತಹಶೀಲ್ದಾರರ ಕಚೇರಿ ಎದುರು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದೆ ಸಂದರ್ಭದಲ್ಲಿ ಸಲೀಂ ಮಮದಾಪೂರ, ಅಶೋಕ ಗಣಿ, ಚೆನ್ನಪ್ಪ ವಾಲಿಕಾರ, ಸುರೇಶ ಸಾರವಾಡ, ಶ್ರೀಧರ ಬೆಳೆಗಾರ,ಧರೆಪ್ಪ ನ್ಯಾಮಗೊಂಡ, ಸೇರಿದಂತೆ ಕರವೇ ಕಾರ್ಯಕರ್ತರು ಹಾಗೂ ರೈತರು ಇದ್ದರು
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 