ರೈತರ ಸಂಪೂರ್ಣ ಸಾಲ ಮನ್ನಾ; ಮಹಾರಾಷ್ಟ್ರ ಸಿಎಂ ಠಾಕ್ರೆ ಹೇಳಿಕೆ

uddhav thakre

 ಪುಣೆ, ಡಿ 25-ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಬುಧವಾರ ಘೋಷಿಸಿದ್ದಾರೆ. 

ಶಿವಸೇನಾ ನೇತೃತ್ವದ ಮೈತ್ರಿ ಸರ್ಕಾರ 2015ರ ಏಪ್ರಿಲ್ 1ರಿಂದ 2019ರ ಮಾರ್ಚ್ 31ರೊಳಗೆ ರೈತರು ಪಡೆದಿರುವ 2 ಲಕ್ಷ ರೂ. ವರೆಗಿನ ಬೆಳೆ ಸಾಲ ಮನ್ನಾ ಯೋಜನೆಗೆ ಔಪಚಾರಿಕ ಅನುಮೋದನೆ ನೀಡಿದ ಬೆನ್ನಲ್ಲೇ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. 

ಅವರು ವಸಂತ್ದದ ಸಕ್ಕರೆ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. 

ಈಗಾಗಲೇ ನಾವು ಪ್ರತಿ ರೈತರ 2 ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದು ಘೋಷಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆ ಹಾಗೂ ಎನ್ ಸಿಪಿ  ಅಧ್ಯಕ್ಷ  ಶರದ್ ಪವಾರ್ ಉಪಸ್ಥಿತರಿದ್ದರು.