ಸಂಪೂರ್ಣ ಜಿಲ್ಲೆ ಬರಗಾಲ ಘೋಷಣೆಗೆ ರೈತರ ಹೋರಾಟ 11ನೇ ದಿನಕ್ಕೆ
Farmers' protest demanding the declaration of the entire district as drought-hit enters the 11th day
ಸಂಪೂರ್ಣ ಜಿಲ್ಲೆ ಬರಗಾಲ ಘೋಷಣೆಗೆ ರೈತರ ಹೋರಾಟ 11ನೇ ದಿನಕ್ಕೆ
ವಿಜಯಪುರ 11: ಜಿಲ್ಲೆಯನ್ನು ಸಂಪೂರ್ಣ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿರುವ ಅನಿರ್ದಿಷ್ಟ ಹೋರಾಟ 11ನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟದಲ್ಲಿ ಮಾತನಾಡಿದ ಹಿರಿಯ ರೈತ ಹೋರಾಟಗಾರ ಹಾಗೂ ಭಾರತೀಯ ರೈತ ಸಂಘದ ಮುಖಂಡ ಗುರುನಾಥ ಬಗಲಿ, ಜಿಲ್ಲೆಯ ರೈತರಲ್ಲಿ ಯಾವುದೇ ಬೇಧಭಾವ ಮಾಡದೆ ಎಲ್ಲಾ 13 ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಬೇಕು. ನೀರಿನ ಮೂಲಗಳು ಹೆಚ್ಚಿರುವ ತಾಲೂಕುಗಳನ್ನು ಮಾತ್ರ ಬರಗಾಲದಿಂದ ಹೊರಗಿಟ್ಟು ಮಳೆಯನ್ನೇ ಅವಲಂಬಿಸಿರುವ ರೈತರಿಗೆ ಅನ್ಯಾಯ ಮಾಡಬಾರದು ಎಂದು ಒತ್ತಾಯಿಸಿದರು.
ಹಿರಿಯ ರೈತ ಹೋರಾಟಗಾರ ಕಲ್ಲಪ್ಪ ಪಾರಶೆಟ್ಟಿ ಮಾತನಾಡಿ, ಕೂಡಲೇ ಜಿಲ್ಲೆಯ 13 ತಾಲೂಕುಗಳನ್ನು ಬರಗಾಲವೆಂದು ಘೋಷಿಸಬೇಕು. ಇಲ್ಲದಿದ್ದರೆ ರೈತರು ಜೀವನೋಪಾಯಕ್ಕಾಗಿ ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಸಾಲದ ಒತ್ತಡದಿಂದ ರೈತರು ಆತ್ಮಹತ್ಯೆಯಂತಹ ದುಷ್ಪರಿಣಾಮಗಳಿಗೆ ಒಳಗಾಗುವ ಸಾಧ್ಯತೆಯಿದ್ದು, ಇದಕ್ಕೆ ಸರ್ಕಾರ ಹಾಗೂ ಜನಪ್ರತಿನಿಧಿಗಳೇ ಹೊಣೆಗಾರರಾಗಲಿದ್ದಾರೆ ಎಂದು ಎಚ್ಚರಿಸಿದರು. ರೈತರ ಪ್ರಮುಖ ಬೇಡಿಕೆಗಳಾದ ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ, ಬೆಳೆ ವಿಮೆ ಪಾವತಿಸಿರುವ ರೈತರಿಗೆ ಶೇ.50ರಷ್ಟು ಮಧ್ಯಂತರ ವಿಮೆ ಬಿಡುಗಡೆ, ಜಿಲ್ಲೆಯ ಹಳ್ಳ, ಕೊಳ್ಳ, ಕೆರೆ ಹಾಗೂ ಕಾಲುವೆಗಳನ್ನು ಭರ್ತಿ ಮಾಡುವುದು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸುವುದು ಹಾಗೂ ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಅಂಬರೇಶ ಭೈರಗೊಂಡ, ಸಂಗಪ್ಪ ಟಕ್ಕೆ, ಮಹಾದೇವ ಬನಸೋಡ್, ರಾಮನಗೌಡ ಪಾಟೀಲ, ವಸಂತ ಭೈರಮಾಡಿ, ಗೇನಪ್ಪ ಬಿರಾದಾರ, ಈರ್ಪ ಕುಳೆಕುಮಟಗಿ, ಶಿವಾನಂದ ಹಿರೇಮಠ ಸೇರಿದಂತೆ ಹಲವು ರೈತ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 