ಅಳವಂಡಿಯಲ್ಲಿ ರೈತರ ಪ್ರತಿಭಟನೆ: 7 ಗಂಟೆ ವಿದ್ಯುತ್ಗೆ ಆಗ್ರಹ
Farmers' protest in Alavandi: Demand for 7 hours of electricity
ಕೊಪ್ಪಳ 21: ತೀವ್ರ ಬರ ಪರಿಸ್ಥಿತಿಯ ನಡುವೆಯೂ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿದ್ದ ತ್ರೀಫೇಸ್ ವಿದ್ಯುತ್ನ್ನು 7ರಿಂದ 6 ಗಂಟೆಗೆ ಕಡಿತಗೊಳಿಸಿರುವುದನ್ನು ಖಂಡಿಸಿ, ಕೊಪ್ಪಳ ಬಿಜೆಪಿ ಗ್ರಾಮೀಣ ಮಂಡಲದ ವತಿಯಿಂದ ಅಳವಂಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾವಟರ್, ಮಹಾಂತೇಶ್ ಪಾಟೀಲ್ ಹಾಗೂ ವೀರೇಶ್ ಸಜ್ಜನ್ ನೇತೃತ್ವದಲ್ಲಿ ಸಾವಿರಾರು ರೈತರು ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೂ ಮುನ್ನ ರೈತರು ಪೋಸ್ಟರ್ಗಳನ್ನು ಹಿಡಿದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ನಡೆಸಿದರು. ಅಳವಂಡಿ ಶ್ರೀ ಸಿದ್ದೇಶ್ವರ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಪಾದಯಾತ್ರೆಗೆ ಚಾಲನೆ ನೀಡಿದರು.
ಡಾ. ಬಸವರಾಜ ಕ್ಯಾವಟರ್ ಮಾತನಾಡಿ, ಬರದ ಸಂದರ್ಭದಲ್ಲಿ ರೈತರಿಗೆ ಕನಿಷ್ಠ 7 ಗಂಟೆ ತ್ರೀಫೇಸ್ ವಿದ್ಯುತ್ ನೀಡಬೇಕು ಹಾಗೂ ಕೊಪ್ಪಳವನ್ನು ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು. ಕೊಪ್ಪಳಕ್ಕೆ ಮಂಜೂರಾದ ಸಬ್ಸ್ಟೇಷನ್ಗಳ ಕಾಮಗಾರಿ ವಿಳಂಬವಾಗಿರುವುದನ್ನೂ ಪ್ರಶ್ನಿಸಿದರು.
ಶಾಸಕ ರಾಘವೇಂದ್ರ ಹಿಟ್ನಾಳ್ ವಿರುದ್ಧ ಟೀಕಾಪ್ರಹಾರ ನಡೆಸಿದ ಕ್ಯಾವಟರ್, ರೈತರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ ಟ್ರಾನ್ಸ್ಫಾರ್ಮರ್ ದರ ಹೆಚ್ಚಳದ ಬಗ್ಗೆಯೂ ರೈತರು ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಕಡಿಮೆ ದರದಲ್ಲಿ ದೊರೆಯುತ್ತಿದ್ದ ಟ್ರಾನ್ಸ್ಫಾರ್ಮರ್ಗೆ ಇದೀಗ ಹೆಚ್ಚಿನ ಹಣ ಪಾವತಿಸಬೇಕಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಳವಂಡಿ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ರೈತರು ಭಾಗವಹಿಸಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 