ಬರ ಘೋಷಣೆಗೆ ತಾಳಿಕೋಟಿಯಲ್ಲಿ ರೈತರ ಹೋರಾಟ
Farmers' protest in Talikoti demanding drought declaration
ತಾಳಿಕೋಟಿ 19: ತಾಲೂಕನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ರೈತರ ಅನಿರ್ದಿಷ್ಟಾವಧಿ ಹೋರಾಟ ಎರಡನೇ ದಿನವೂ ತೀವ್ರಗೊಂಡಿತು. ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ರೈತರು ಬಂಡಿಗಳೊಂದಿಗೆ ಪಟ್ಟಣಕ್ಕೆ ಆಗಮಿಸಿ ಬೃಹತ್ ಮೆರವಣಿಗೆ ನಡೆಸಿದರು. ಪ್ರವಾಸಿ ಮಂದಿರದಿಂದ ಆರಂಭವಾದ ಮೆರವಣಿಗೆ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಕತ್ರಿ ಬಜಾರ್, ಖಾಸ್ಗತೇಶ್ವರ ಮಠ, ಶಿವಾಜಿ ವೃತ್ತ ಹಾಗೂ ಬಸ್ ನಿಲ್ದಾಣದ ಮೂಲಕ ಸಾಗಿ ಧರಣಿ ಸ್ಥಳ ತಲುಪಿತು. ರೈತರು ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಮಾತನಾಡಿ, ತಿಕೋಟಾ ತಾಲೂಕಿಗಿಂತ ಹೆಚ್ಚಿನ ಮಳೆ ತಾಳಿಕೋಟಿಯಲ್ಲಿ ಆಗದಿದ್ದರೂ ತಿಕೋಟಾವನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅದೇ ಮಾನದಂಡದಡಿ ತಾಳಿಕೋಟಿಯನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತಾಳಿಕೋಟಿ ಕುರಿತು ನಿರ್ಧಾರ ಕೈಗೊಳ್ಳಬೇಕು. ರೈತರ ಹಿತದೃಷ್ಟಿಯಿಂದ ರಾಜಕೀಯ ಪ್ರಭಾವ ಬಳಸಿಕೊಂಡು ತಾಲೂಕಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು. ಸೆ.21ರಂದು ತಾಳಿಕೋಟಿ ಸಂಪೂರ್ಣ ಬಂದ್ ನಡೆಸಲಾಗುವುದು. ಸರ್ಕಾರ ಸ್ಪಂದಿಸದಿದ್ದರೆ ಸಾವಿರಾರು ರೈತರೊಂದಿಗೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ನಡಹಳ್ಳಿ ಎಚ್ಚರಿಸಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 