ಯೂರಿಯಾ ಗೊಬ್ಬರ ಕೊರತೆ ರೈತ ರ ಪರದಾಟ
Farmers' protest over urea fertilizer shortage
ಹೂವಿನಹಡಗಲಿ 23 : ಪಟ್ಟಣದಲ್ಲಿ ಕೃಷಿಗೆ ಅಗತ್ಯವಾದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ಸಮರ್ಕವಾಗಿ ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ.ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ರುವ ರೈತ ಸೇವಾ ಸಹಕಾರ ಸಂಘ ಹಾಗೂ ತಾಲೂಕು ಕಚೇರಿ ಬಳಿ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಮಂಗಳವಾರ. ಬುಧವಾರ ಯೂರಿಯಾ ಗೊಬ್ಬರ ಬಂದಿದ್ದು.
ಪಟ್ಟಣದ ಸುತ್ತಮುತ್ತಲಿನ ರೈತ ರು ಸರದಿ ಸಾಲಿನಲ್ಲಿ ನಿಂತು ತಲಾ ಎರಡು ಚೀಲದಂತೆ ಗೊಬ್ಬರವನ್ನು ತೆಗೆದುಕೊಂಡು ಹೋಗುತ್ತಿದ್ದರು ಕೆಲವರಿಗೆ ಗೊಬ್ಬರ ಸಿಗದೇ ನಿರಾಸೆಯಾದರು. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗಿದ್ದು, ಇದರಿಂದ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಕಡಿಮೆ ದರ ಎನ್ನುವ ಕಾರಣಕ್ಕೆ ಯೂರಿಯಾ ಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಬಂದಿದೆ. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ , ಗೋವಿನ ಜೋಳ ಬೆಳೆಯಲಾಗುತ್ತದೆ. ಅಗತ್ಯ ಪ್ರಮಾಣದಲ್ಲಿ ಯೂರಿಯಾ ನೀಡಿದರೆ ಈ ಬೆಳೆಗಳು ಚೇತರಿಸಿಕೊಂಡು ಬೆಳವಣಿಗೆ ಉತ್ತಮಗೊಳ್ಳುತ್ತದೆ ಎಂಬ ಉದ್ದೇಶದಿಂದ ಯೂರಿಯಾ ಖರೀದಿಸಲು ರೈತರು ಮುಂದಾಗಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 