ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರ ಆಗ್ರಹ
Farmers demand fulfillment of various demands
ವಿಜಯಪುರ, 21 : ಜಿಲ್ಲೆಯ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿ ಶೀಘ್ರದಲ್ಲಿ ಅತಿವೃಷ್ಠಿ ಪರಿಹಾರ, ವಿಮೆ ಪರಿಹಾರ, ಮೆಕ್ಕೆಜೋಳ ಮತ್ತು ತೊಗರಿ ಬೆಂಬಲ ಬೆಲೆಯೊಂದಿಗೆ ಖರೀಧಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿದರು.
ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ ಅಂದಾಜು 1 ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗಿದ್ದು ಒಂದು ವಷ್ ಕಳೆದರೂ ಇಲ್ಲಿಯವರೆಗೆ ದ್ರಾಕ್ಷಿ ವಿಮೆ ಜಮಾ ಆಗಿರುವುದಿಲ್ಲ, ನೆರೆಯ ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ 15 ದಿನಗಳ ಹಿಂದೆಯೇ ಜಮಾ ಆಗಿವೆ ಕೂಡಲೇ ನಮ್ಮ ಜಿಲ್ಲೆಯ ತೋಟಗಾರಿಕಾ ಬೆಳೆಗಳಿಗೂ ವಿಮೆ ಜಮಾ ಮಾಡಬೇಕು ಎಂದರು
ಜಿಲ್ಲೆಯಲ್ಲಿ ಇತ್ತಿಚಿಗೆ ಸುರಿದ ವಿಪರಿತ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಸಂಪೂರ್ಣ ನಷ್ಟಗೊಂಡಿರುವ ಹಿನ್ನಲೆಯಲ್ಲಿ ಜಂಟಿ ಸಮೀಕ್ಷೆ ಮಾಡಲಾಗಿ ಮಾನ್ಯ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ಮಾಡಿ 50 ದಿನಗಳು ಗತಿಸಿದರು ಇಲ್ಲಿಯವರೆಗೆ ನಷ್ಟ ಪರಿಹಾರ ಜಮಾ ಆಗಿರುವುದಿಲ್ಲ ಕೂಡಲೇ ರೈತರ ಖಾತೆಗ ಜಮಾ ಮಾಡಬೇಕು
2025-26 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಅನೇಕ ಜನರು ಮೆಕ್ಕೆಜೋಳ ಬೆಳೆದಿದ್ದಾರೆ, ದಲ್ಲಾಳಿಗಳು ಅತ್ಯಂತ ಕಡಿಮೆ ದರಕ್ಕೆ ಅಂದರೆ 1500 ರಿಂದ 1850 ರವರೆಗೆ ಮಾತ್ರ ಖರೀಧಿ ಮಾಡುತ್ತಿದ್ದಾರೆ. ಕೂಡಲೇ ಬೆಂಬಲ ಬೆಲೆಯೊಂದಿಗೆ ಖರೀಧಿ ಕೇಂದ್ರ ಪ್ರಾರಂಭವಾಗಬೇಕು
2025-26 ನೇ ಸಾಲಿನ ತೊಗರಿಯನ್ನು ಬೆಂಬಲ ಬೆಲೆಯೊಂದಿಗೆ ಖರೀಧಿ ಕೇಂದ್ರ ಪ್ರಾರಂಭವಾಗಬೇಕು
ಪ್ರತಿ ವರ್ಷ ಆಯಾ ಬೆಳೆಗಳು ಬರುವುದಕ್ಕೆ ಮುಂಚೆ ಬೆಂಬಲ ಬೆಲೆಯೊಂದಿಗೆ ಖರೀಧಿ ಕೇಂದ್ರ ಪ್ರಾರಂಭವಾಗೇಕು, ರೈತರು ಬಹುತೇಕ ಬೆಳೆಗಳನ್ನು ಮಾರಾಟ ಮಾಡಿದ ನಂತರ ನೆಪ ಮಾತ್ರಕ್ಕೆ ಖರೀಧಿ ಕೇಂದ್ರ ಪ್ರಾರಂಭಿಸಿದರೆ ಯಾರಿಗೂ ಉಪಯೋಗ ಆಗುವುದಿಲ್ಲ, ಈ ಕುರಿತು ಮುಂದಿನ ವರ್ಷದಿಂದ ಜಿಲ್ಲಾಡಳಿತ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು ಎಂದರು.
ಇದೇ ವೇಳೆ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೂ ಮನವಿ ಸಲ್ಲಿಸಿ ಈ ಮೇಲಿನ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸದಿದ್ದರೆ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ಈ ಮೂಲಕ ಎಚ್ಚರಿಸಿದರು.
ಈ ವೇಳೆ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷರಾದ ಕಲ್ಲು ಸೋನ್ನದ, ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ, ಮುಖಂಡರಾದ ಮಹಾದೇವ ಬನಸೋಡೆ, ಪ್ರಕಾಶ ತೆಲಿ, ಸಚಿನ ಜೇವರ್ಗಿ, ಸಿದ್ದು ಕುಂಬರ, ಶಿವು ಅಂಬಲಿ, ಸೀತಾರಮ ಭಜಂತ್ರಿ, ಮಹದೇವ ಕದಮ್, ಮುದಕಣ್ಣ ಹೋರ್ತಿ, ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 