ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಕಾಮಗಾರಿ ಸ್ಥಗಿತಕ್ಕೆ ರೈತರ ಪ್ರತಿಭಟನೆ
Farmers protest against suspension of water works for Dharwad industrial zone
ಉಳ್ಳಾಗಡ್ಡಿ-ಖಾನಾಪೂರ 20: ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆ ಮಾಡಲು ಸರ್ಕಾರ ಮುಂದಾಗಿರುವ ಧೋರಣೆ ಖಂಡಿಸಿ ಶುಕ್ರವಾರ 18 ರಂದು ಹಿಡಕಲ್ ಡ್ಯಾಮ್‌ನಲ್ಲಿ "ನಮ್ಮ ನೀರು ನಮ್ಮ ಹಕ್ಕು" ಸಮಿತಿ ವತಿಯಿಂದ ರೈತರು ಉಗ್ರ ಪ್ರತಿಭಟನೆ ಮಾಡಿದರು,
ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆ ಘಟಪ್ರಭಾ ನದಿಯ ಹಿಡಕಲ್ ಜಲಾಶಯ ಮುಂದೆ ಜಾಕವೆಲ್ ಕೆಲಸ ಪ್ರಾರಂಭವಾಗಿದ್ದು ಮೊದಲಿಗೆ ಹುಕ್ಕೇರಿ ತಾಲೂಕಿನ ರೈತರು ಗೋಕಾಕ ಹೊಗುವ ರಸ್ತೆ ಸರ್ಕಲ್ ಬಳಿ ಜಮಾಯಿಸಿ ಜಾಕ್‌ವೆಲ್ ಕೆಲಸ ಆರಂಭವಾಗಿದ್ದ ಸ್ಥಳಕ್ಕೆ ಹೋಗಿ ಕಾಮಗಾರಿ ಸ್ಥಳಕ್ಕೆ ಸಾಂಕೇತಿಕವಾಗಿ ಕಲ್ಲು ಮಣ್ಣು ಹಾಕಿದರು. ನಂತರ ಪಾದಯಾತ್ರೆ ಮೂಲಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರ ಕಚೇರಿಗೆ ತೆರಳಿ ಪ್ರತಿಭಟನೆ ಮಾಡಿದರು, ರೈತರಿಗೆ ಮೋಸ ಮಾಡುತ್ತಿರುವ ರಾಜಕಾರಣಿಗಳಿಗೆ ಹಾಗೂ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ ವಿರುದ್ಧ ಘೋಷಣೆ ಕೂಗುತ್ತಾ ಅಕ್ರೋಶವನ್ನು ವ್ಯಕ್ತಪಡಿಸಿದರು,
ಮಾಜಿ ಸಚಿವ ಶಶಿಕಾಂತ ನಾಯಿಕ ಮಾತನಾಡಿ ಹುಕ್ಕೇರಿ ತಾಲೂಕಿನ ರೈತರಿಗೆ ಇನ್ನೂ ನೀರಾವರಿ ಸೌಲಭ್ಯ ಸಿಗುತ್ತಿಲ್ಲ ಹುಕ್ಕೇರಿ ತಾಲೂಕಿನ ಯಾತ್ ನೀರಾವರಿಗಳಿಗೆ ಕೊನೆಯ ಹೊಲದವರಿಗೆ ನೀರು ಸರಿಯಾಗಿ ತಲುಪುತ್ತಿಲ್ಲ ಅಂತಹದರಲ್ಲಿ 80 ಕಿಮೀ ದೂರದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆ ಯೋಜನೆ ಸರ್ಕಾರವು ಕೈಬಿಡಬೇಕು ನಮ್ಮಲ್ಲಿ ತಾಲೂಕಿನ ಕೈಗಾರಿಕೆ ಆರಂಭವಾದರೆ ಇಲ್ಲಿಯ ನಿರುದ್ಯೋಗ ಯುವಕರಿಗೆ ಉದ್ಯೋಗ ಸಿಗುತ್ತದೆ. ಇಂದಿನ ಹೋರಾಟವು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ ನೀರು ಪೂರೈಕೆ ಕಾಮಗಾರಿಯು ಸ್ಥಗಿತಗೊಳಿಸದಿದ್ದರೆ ಮುಂದೆ ಹುಕ್ಕೇರಿ ತಾಲೂಕಿನ ಸಮಸ್ತ ರೈತರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಹಿಡಕಲ್ ಡ್ಯಾಮ ಕ.ನೀ.ನಿ. ಪ್ರಭಾರಿ ಕಾರ್ಯನಿರ್ವಾಹಕ ಅಭಿಯಂತ ಅರವಿಂದ ಎಚ್. ಜಮಖಂಡಿ ಮಾತನಾಡಿ ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಚರ್ಚಿಸಿ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಪೂರೈಕೆ ಯೋಜನಯ ಕಾಮಗಾರಿಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಹಿರಿಯ ಹೋರಾಟಗಾರ ರಾಮಚಂದ್ರ ಜೊಶಿ, ಚಿಕ್ಕೋಡಿ ಜಿಲ್ಲಾ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ದುಂಡನಗೌಡ ಎಸ್ ಪಾಟೀಲ, ಜಿಲ್ಲಾಧ್ಯಕ್ಷ ಬಸವಪ್ರಭು ಸುರೇಶ ವಂಟಮೂರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗೋಪಾಲ ಮರಬಸನವರ, ದಲಿತಪರ ಸಂಘಟನೆಗಳ ಸಂಚಾಲಯಕ ಬಸವರಾಜ ತಳವಾರ, ಕರ್ನಾಟಕ ರಕ್ಷಣಾ ವೇದಿಕೆ ಹುಕ್ಕೇರಿ ತಾಲೂಕಾಧ್ಯಕ್ಷ ಸುಧೀರ ಪಾಟೀಲ, ಗಂಗಾಧರ ಪಾಟೀಲ, ಅಪ್ಪಾಸಾಹೇಬ ಸಾರಾಪೂರೆ, ಜಗದೀಶ ಮುಗಳಖೋಡ, ಬಸವಣ್ಣಿ ಕಂಬಾರ, ಲಕ್ಷ್ಮಣ ಅಕ್ಕತೇಂಗೆರಹಾಳ, ಕಲ್ಲಪ್ಪ ಅಕ್ಕತೇಂಗೇರಹಾಳ, ಜಿಯಾವುಲ್ಲಾ ವಂಟಮೂರಿ, ಮೆಹಬೂಬ ಮುಲ್ಲಾ, ಬಸವರಾಜ ಹುಲಕುಂದ ನಿರಂಜನ ಶಿರೂರ, ಮುಂತಾದವರು ಉಪಸ್ಥಿತರಿದ್ದರು. ಯಮಕನಮರಡಿ ಸಿಪಿಐ ಜಾವೇದ ಮುಶಾಪೂರಿ ನೇತ್ರತ್ವದಲ್ಲಿ ಪೋಲೀಸ ಬಂದೂಬಸ್ತ್ ಮಾಡಲಾಗಿತ್ತು. 20 ಪೋಲೀಸರು ಬಂದೂಬಸ್ತಿಯಲ್ಲಿ ಪಾಲ್ಗೊಂಡಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 